Advertisement

ದಿವ್ಯಾ ಹಾಗರಗಿ ಸ್ಟ್ರಾಂಗ್ ಏನಿಲ್ಲ, ಆಸ್ತಿ ಮುಟ್ಟುಗೋಲು ಹಾಕುತ್ತೇವೆ : ಆರಗ ಜ್ಞಾನೇಂದ್ರ

01:47 PM Apr 28, 2022 | Team Udayavani |

ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸ್ಟ್ರಾಂಗ್ ಏನಿಲ್ಲ, ಅವರು ಊರು ಬಿಟ್ಟಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದು ಮಾಡಿದ್ದೇವೆ.ಹಣಕ್ಕೆ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್ ಗಳನ್ನೂ ಹೊರಗೆ ತರುತ್ತೇವೆ ಎಂದರು.

ಇದುವರೆಗೂ ದಿವ್ಯಾ ಹಾಗರಗಿ ಬಂಧನ ಮಾಡದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದರು.

ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹಾಜರಾಗದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಿಯಾಂಕ ಖರ್ಗೆ ಅನೇಕ ಆರೋಪ ಮಾಡಿದ್ದಾರೆ.ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಇವರು ತನಿಖೆಗೆ ಸಹಕಾರ ಕೊಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ಅವರು ದಾಖಲೆ ಕೊಡಬಹುದು ಅಲ್ವಾ? ಅವ್ರ ತಂದೆ ಎಷ್ಟು ದೊಡ್ಡವರು? ಅವರಿಗೆ ತನಿಖೆ ಬಗ್ಗೆ ಗೊತ್ತಿಲ್ಲವೇ? ಅವರನ್ನು ಏನು ಅರೆಸ್ಟ್ ಮಾಡ್ತಾರಾ? ವಿಚಾರಣೆ ತಾನೇ ಮಾಡೋದು, ಅವರ ಬಳಿ ಇರುವ ದಾಖಲೆ ಕೊಡಲಿ. ಬುಟ್ಟಿಯಲ್ಲಿ ಹಾವು ಇಟ್ಟುಕೊಂಡು ಬಿಡ್ತೀನಿ ಅನ್ನೋದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಮೃತ್ ಪೌಲ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಸಹಜ ಪ್ರಕ್ರಿಯೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತೋ ಅವರೇ ತಪ್ಪಿತಸ್ಥರು ಆಗುತ್ತಾರೆ ಎಂದರು.

Advertisement

ಬೆಂಗಳೂರಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ನಾಗೇಶ್ ಎಂಬುವನು ಯುವತಿ ಮೇಲೆ ಆ್ಯಸಿಡ್ ಹಾಕಿದ್ದಾನೆ. ಈ ಕಾಲದಲ್ಲಿ ಇದೊಂದು ಅಮಾನುಷ ಕೃತ್ಯ. ಪೊಲೀಸರು ಅವನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಯುವತಿಯನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಿ, ಒಳ್ಳೆಯ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next