Advertisement

ಮೇಕೆದಾಟು ನಿಲುವಿಗೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ

10:39 PM Oct 03, 2021 | Team Udayavani |

ಬಳ್ಳಾರಿ: ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆಯುವ ತಮಿಳುನಾಡು ನಿಲುವು ಗೊತ್ತಿರುವ ವಿಚಾರ. ಮೇಕೆದಾಟು ಯೋಜನೆ ನಮ್ಮ ಕೈಯಲ್ಲಿದ್ದು ನಮ್ಮ ನಿಲುವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

Advertisement

ಭಾನುವಾರ ಎಸ್‌.ಕೆ. ಮೋದಿ ನ್ಯಾಷನಲ್‌ ಸ್ಕೂಲ್‌ನ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆಗೆ ತಮಿಳುನಾಡಿನವರು ರಾಜಕಾರಣವನ್ನು ಬೆರೆಸುತ್ತಾರೆ. ಆ ಯೋಜನೆ ಮಾಡುವುದು ತಮಿಳುನಾಡು ಕೈಯಲ್ಲಿಲ್ಲ. ನಮ್ಮ ಕೈಯಲ್ಲಿದೆ. ಆದ್ದರಿಂದ ಅದರ ಬಗ್ಗೆ ವೃಥಾ ಚರ್ಚೆ ಅನಗತ್ಯ ಎಂದರು.

ಸಾಮಾನ್ಯವಾಗಿ ಸಾರ್ವತ್ರಿಕ, ಉಪಚುನಾವಣೆಗಳನ್ನು ವಿಶ್ಲೇಷಣೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದೆ ಕಾಂಗ್ರೆಸ್‌ ಗೆದ್ದಿತ್ತು. ಕಳೆದ ಸಲ ಬಿಜೆಪಿ ಜಯ ಗಳಿಸಿದೆ. ಹಾಗಾಗಿ ಬಿಜೆಪಿಯ ಹಾನಗಲ್‌, ಜೆಡಿಎಸ್‌ನ ಸಿಂದಗಿ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.

ಇದನ್ನೂ ಓದಿ:ಜಮ್ಮು – ಕಾಶ್ಮೀರ ಉರಿಯಲ್ಲಿ ಡ್ರಗ್ಸ್‌ ಸಾಗಾಟ?

ಹಲವು ಕಾರ್ಪೊರೇಟ್‌ ಸಂಸ್ಥೆಗಳು ಬಳ್ಳಾರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಎಕರೆ ಜಮೀನು ಪಡೆದು ಹತ್ತು ವರ್ಷಗಳಿಂದ ಉದ್ದೇಶ ಈಡೇರಿಸಿಲ್ಲ. ಕೈಗಾರಿಕೆ ಸ್ಥಾಪಿಸಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡಿಲ್ಲ. ಏನೇನು ಕಾರಣಗಳು ಇವೆ ಎಂಬುದನ್ನು ನೋಡಿ ಈ ಕುರಿತು ಮರು ಪರಿಶೀಲಿಸಲಾಗುವುದು. ತುಂಗಾಭದ್ರಾ ಜಲಾಶಯದ ನೀರು ವ್ಯರ್ಥವಾಗಿ ಸಮುದ್ರ ಸೇರದಂತೆ ಸಮಾನಂತರ ಜಲಾಶಯ ನಿರ್ಮಾಣ ಕಾರ್ಯ ಮಾಡಲಾಗುವುದು. ಬಳ್ಳಾರಿ ನಗರದ ನಿರಂತರ ಕುಡಿಯುವ ನೀರು ಯೋಜನೆಯ ದೋಷಗಳ ಬಗ್ಗೆ ತಿಳಿದುಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Advertisement

ಸಿಎಂ ಆಗುತ್ತೇನೆಂದು ನಿರೀಕ್ಷಿಸಿರಲಿಲ್ಲ
ಬಳ್ಳಾರಿ: ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ನಾನು ಸಿಎಂ ಆಗಿರುವುದು ದೈವಿಚ್ಛೆ, ನಿಕಟಪೂರ್ವ ಸಿಎಂ ಬಿ.ಎಸ್‌. ಯಡಿಯೂರಪ್ಪ ಮತ್ತು ನಮ್ಮ ಹೈಕಮಾಂಡ್‌ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವೀರಶೈವ ವಿದ್ಯಾವರ್ಧಕ ಸಂಘದ ಎಸ್‌.ಕೆ.ಮೋದಿ ನ್ಯಾಷನಲ್‌ ಸ್ಕೂಲ್‌ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಪಕ್ಷ ಹಾಗೂ ಜನತೆ ನೀಡಿದ ಜವಾಬ್ದಾರಿ ದೊಡ್ಡದಿದೆ ಎಂಬ ಅರಿವು ನನಗಿದೆ. ನಾಯಕರು ನನ್ನ ಮೇಲೆ ಹಾಕಿರುವ ಶಾಲು-ಮಾಲೆ ನನಗೆ ಶ್ರೀರಕ್ಷೆ ಎಂದು ಭಾವಿಸಿದ್ದೇನೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿ ಸಿದಂತೆ ನನ್ನ ಮೇಲಿಟ್ಟುಕೊಂಡಿರುವ ನಿರೀಕ್ಷೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next