Advertisement

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

09:10 PM Nov 26, 2024 | Team Udayavani |

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬ್ರಿಟನ್‌ ಪೌರತ್ವ ಹೊಂದಿದ್ದಾರೆ. ಹೀಗಾಗಿ ಅವರ ಭಾರತದ ಪೌರತ್ವ ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ಗೆ ಕರ್ನಾಟಕದ ವಿಘ್ನೇಶ್‌ ಶಿಶಿರ್‌ ಮನವಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಪ್ರಶ್ನಿಸಿದ ವೇಳೆ, ಈ ಆರೋಪಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಸರ್ಕಾರ ಹೇಳಿದೆ.

Advertisement

ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ವಿಘ್ನೇಶ್‌, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಡಿ.19ರಂದು ಸ್ಪಷ್ಟ ತೀರ್ಪು ನೀಡುವುದಾಗಿ ಸೂಚಿಸಿದೆ. ಇಲ್ಲಿಯವರೆಗೆ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸಿ, ಕೋರ್ಟ್‌ಗೆ ಮಾಹಿತಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next