Advertisement

G20 ಶೃಂಗಸಭೆಯಲ್ಲಿ ಪುಟಿನ್ ಭಾಗಿಯಾಗುವುದನ್ನು ಎದುರು ನೋಡುತ್ತಿದ್ದೇವೆ: MEA

05:07 PM Jul 20, 2023 | Team Udayavani |

ಹೊಸದಿಲ್ಲಿ : ಜಿ 20 ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಭಾಗವಹಿಸುವಿಕೆಯನ್ನು ಎದುರು ನೋಡುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆ ನೀಡಿದ್ದಾರೆ.

Advertisement

ಪುಟಿನ್ ಅವರು ಭಾರತದಲ್ಲಿ ನಡೆಯುವ ಶೃಂಗಸಭೆಯಲ್ಲಿ ಭಾಗವಹಿಸುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ “ನಾವು ರಷ್ಯಾ ನಾಯಕನ ಭಾಗವಹಿಸುವಿಕೆಯನ್ನು ಎದುರು ನೋಡುತ್ತಿದ್ದೇವೆ. ಏಕೆಂದರೆ ಇದು ಭೌತಿಕ ಶೃಂಗಸಭೆಯಾಗಿದೆ. ಎಲ್ಲರಿಗೂ ಆಹ್ವಾನಗಳನ್ನು ಕಳುಹಿಸಲಾಗಿದೆ.” ಎಂದರು.

ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಾಗ್ಚಿ, “ಈ ವಿಷಯ ನಮಗೆ ತಿಳಿದಿದೆ. ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಮತ್ತು ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ವಿಷಯವು ತನಿಖೆಯಲ್ಲಿದ್ದು, ಹೆಚ್ಚಿನ ವಿವರ ತಿಳಿದು ಬಂದರೆ ನಾವು ನಿಮಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ ಎಂದು ಸದ್ಯಕ್ಕೆ ನಾನು ಹೇಳಬಲ್ಲೆ” ಎಂದರು.

ಶ್ರೀಲಂಕಾ ಅಧ್ಯಕ್ಷ ರಣಿಲ್ ವಿಕ್ರಮಸಿಂಘೆ ಅವರ ಭಾರತ ಭೇಟಿ ಕುರಿತು ಪ್ರತಿಕ್ರಿಯಿಸಿ “ಶ್ರೀಲಂಕಾ ನಮ್ಮ ನೆರೆಯ ದೇಶವಾಗಿದ್ದು, ನಾವು ಬಹಳ ಮುಖ್ಯವಾದ ಬಹುಮುಖಿ ಸಂಬಂಧಗಳನ್ನು ಹೊಂದಿದ್ದೇವೆ. ಅವರು ಇಂದು ಆಗಮಿಸುತ್ತಿದ್ದಾರೆ. ಇದು ಅವರ ಮೊದಲ ಭೇಟಿಯಾಗಿದೆ. ಪ್ರಧಾನಿ ಭೇಟಿಗಾಗಿ ನಾವು ಎದುರು ನೋಡುತ್ತಿದ್ದೇವೆ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next