Advertisement

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

11:07 AM Apr 13, 2024 | Team Udayavani |

ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲೆಲ್ಲಿ ರೋಡ್ ಶೋ ನಡೆಸಿದ್ದರು ಅಲ್ಲೆಲ್ಲ ಬಿಜೆಪಿಗೆ ಸೋಲಾಗಿದೆ. ಹೀಗಾಗಿ ಮೋದಿ ರೋಡ್ ಶೋಗಳ ಬಗ್ಗೆ ನಮಗೆ ಯಾವುದೇ ಆತಂಕವಿಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಟೀಕಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಯವರು ಮೊದಲು ತಮ್ಮ ಪಕ್ಷದೊಳಗಿನ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಲಿ. ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಮಾತನಾಡುವ ಬಿಜೆಪಿಯವರು ತಾವು ಯಾಕೆ ಡಾ.ಮಂಜುನಾಥರನ್ನು ಯಾಕೆ ಕಣಕ್ಕಿಳಿಸಿದ್ದಾರೆ. ಸೋಮಣ್ಣರನ್ನು ತುಮಕೂರಿಗೆ ಕರೆದುಕೊಂಡು ಬಂದಿದ್ದಾರೆ. ರಾಜಕೀಯದಲ್ಲಿ ಇದೆಲ್ಲ ಸಾಮಾನ್ಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next