Advertisement

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

02:51 PM Apr 25, 2024 | Team Udayavani |

“ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಬ್ಯಾಡ್‌ ಬಾಯ್ಸ್ ವಿಡಿಯೋ ಸಾಂಗ್‌ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಹಾಡಿಗೆ ವಿಜೇತ್‌ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಭರ್ಜರಿ ಚೇತನ್‌ ಕುಮಾರ್‌ ಸಾಹಿತ್ಯ ಒದಗಿಸಿರುವ ಈ ಹಾಡು, ವಿಜೇತ್‌ ಕೃಷ್ಣ, ಕೀರ್ತನಾ ಚಂದ್ರು ಮತ್ತು ಸುನೈನಾ ಕಂಠಸಿರಿಯಲ್ಲಿ ಮೂಡಿ ಬಂದಿದೆ.

Advertisement

ಅರುಣ್‌ ಅಮುಕ್ತ ಈ ಚಿತ್ರದ ನಿರ್ದೇಶಕರು. ಯುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಮೂಡಿಬಂದಿರುವ ಈ ಹಾಡನ್ನು ತಾಂತ್ರಿಕವಾಗಿಯೂ ವಿಶೇಷತೆಗಳೊಂದಿಗೆ ರೂಪಿಸಲಾಗಿದೆ. ಈ ಹಾಡಿಗೆ ಎಐ ಆನಿಮೇಷನ್‌ ನಡೆಸಲಾಗಿದೆ. ಈ ಹಾಡಿನಲ್ಲಿ ಮನೋಜ್‌ ವಿವಾನ್‌, ಮನಸ್ವಿ, ಭಾವನಾ ಅಪ್ಪು, ಅಮರ್‌ ಮುಂತಾದವರು ಕಾಣಿಸಿಕೊಂಡಿದ್ದಾರೆ.

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕುಮಾರ್‌ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ, ಪವನ್‌ ಗೌಡ ಸಂಕಲನ, ಟೈಗರ್‌ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಚಂದನ್‌ ಶೆಟ್ಟಿ, ಅಮರ್‌, ಭಾವನಾ, ಮಾನಸಿ, ವಿವಾನ್‌, ಕಾಕ್ರೋಚ್‌ ಸುಧಿ ಮುಂತಾದವರು ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next