Advertisement
ನಗರದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ನ 37ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಬಿವಿಪಿ ದೇಶವನ್ನು ಕಟ್ಟುವುದಕ್ಕಾಗಿ ಬೆಳೆದು ಬಂದಸಂಘಟನೆ. ಇದು ಕೇವಲ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಮಾತ್ರ ಹೋರಾಟ ಮಾಡುತ್ತಿಲ್ಲ. ಬದಲಿಗೆ ಈ ದೇಶದ ಅಭಿವೃದ್ಧಿಗೆ, ಯುವ ಶಕ್ತಿಯನ್ನು ಜಾಗೃತಗೊಳಿಸಲು ಕೂಡ ಕೆಲಸ ಮಾಡಿಕೊಂಡು ಬಂದಿದೆ. ಆದರೆ ಕೆಲವರು ಈ ಸಂಘಟನೆ ಹೆಸರಿಗೆ ವಿನಾಕಾರಣ ಮಸಿ ಬಳಿಯುತ್ತಿದ್ದಾರೆ ಎಂದು ಆರೋಪಿಸಿದರು.
ದಿಟ್ಟ ಉತ್ತರವನ್ನು ಕೊಡುತ್ತೇವೆ ಎಂದು ಹೇಳಿದರು. ಕರ್ನಾಟಕದಲ್ಲಿ ಜಾತಿ-ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆದು ಆಳುವ ನೀತಿಯನ್ನು ಇಲ್ಲಿನ ಸರ್ಕಾರ ಮಾಡುತ್ತಿದೆ. ಆದರೆ ಇದು ಬಹಳ ದಿನ ನಡೆಯುವದಿಲ್ಲ. ಇದಕ್ಕೆ ಮುಂಬರುವ ದಿನಗಳಲ್ಲಿ ಎಬಿವಿಪಿ ಮತ್ತು ಸಂಘ ಪರಿವಾರ ತಕ್ಕ ಉತ್ತರ ನೀಡುತ್ತದೆ ಎಂದು ಹೇಳಿದರು. ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಎಬಿವಿಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸುನೀಲ್ ಅಂಬೇಕರ್, ಕರ್ನಾಟಕ ಶತಮಾನಗಳಿಂದಲೂ ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸಿ ಹೆಸರು ಪಡೆದಿರುವ ನಾಡು. ಆದರೆ ಇಲ್ಲಿನ ವಿಚಾರವಾದಿಗಳು ಇದೀಗ ಹಿಂದೂಗಳನ್ನು ನಿಕೃಷ್ಟವಾಗಿ ಕಾಣುತ್ತಿದ್ದಾರೆ. ವಿನಾಕಾರಣ ಆರೋಪಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ.
ಅಧಿಕಾರಕ್ಕಾಗಿ ಧರ್ಮವನ್ನು ಒಡೆದು ಆಳುವ ಪ್ರಯತ್ನಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಎಲ್ಲರೂ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
Related Articles
ಅಚ್ಚುಕಟ್ಟಾಗಿ ಶೃಂಗರಿಸಲಾಗಿದ್ದು, ಕಲಾಭವನದ ಎದುರಿಗೆ ಎಬಿವಿಪಿ ಧ್ವಜಾರೋಹಣ ಮಾಡಲಾಗಿದೆ. ಶಿಬಿರದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ ನಗರದ ವಿವಿಧೆಡೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಕಲಾಭವನದಲ್ಲಿಯೇ ಊಟ ಮತ್ತು ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನ ಹಿನ್ನೆಲೆಯಲ್ಲಿ ಕಲಾಭವನದ ಮೈದಾನದ ಸುತ್ತಲೂ ಬಟ್ಟೆಯ ಕವಾಟು ನಿರ್ಮಿಸಿ ಮೈದಾನಕ್ಕೆ ನೆಲಹಾಸು ಹಾಕಲಾಗಿದೆ.
Advertisement