Advertisement
ಧ.ಗ್ರಾ. ಯೋಜನೆ ಧರ್ಮಸ್ಥಳದ ಯೋಜನಾಧಿಕಾರಿ ಕೃಷ್ಣಪ್ಪ ಪಿ. ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಳೆದ 33 ವರ್ಷಗಳಿಂದ ಕೃಷಿಕರಿಗೆ ಉತ್ತೇಜನ ನೀಡುತ್ತಿದ್ದು ಕೃಷಿಕರು ಸ್ವಾವಲಂಬಿಗಳಾಗಲು ಸಹಕಾರಿಯಾಗಿದೆ. ಪ್ರಸಕ್ತ ವರ್ಷವನ್ನು ಕೃಷಿ ಸ್ವಉದ್ಯೋಗ ವರ್ಷವನ್ನಾಗಿ ಘೋಷಿಸಿದ್ದಾರೆ. ಗ್ರಾಮೀಣ ಜನರು ಇದರ ಸದುಪಯೋಗವನ್ನು ಪಡೆಯಲು ಈ ರೀತಿಯ ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಬಡಗಕಜೆಕಾರು ಗ್ರಾ.ಪಂ. ಅಧ್ಯಕ್ಷ ವಜ್ರಪೂಜಾರಿ ಬಾರ್ದೊಟ್ಟು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಪ್ರಧಾನ ದೇಶದಲ್ಲಿ ನಾವು ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಸ್ವಾವಲಂಬಿಗಳಾಗಬೇಕು. ಇದಕ್ಕೆ ಪೂರಕವಾಗಿರುವ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕಜೆಕಾರು ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಸಿ ಸದಸ್ಯ ಕೆ.ಹರಿಶ್ಚಂದ್ರ ಪೂಜಾರಿ ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ ಎಂದು ಹೇಳಿದರು.
ಉಜಿರೆಯ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಅನುಸೂಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕೃಷಿಗೆ ಪೂರಕವಾದ ಹೈನುಗಾರಿಕೆ, ಕೋಳಿ, ಆಡು ಸಾಕಾಣಿಕೆ ಮತ್ತು ಕೃಷಿಯೇತರ ಸ್ವ ಉದ್ಯೋಗಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯ ಜಯಬಂಗೇರ, ಒಕ್ಕೂಟದ ವಗ್ಗ