Advertisement

ಕಲಬುರ್ಗಿ ಪರಿಸ್ಥಿತಿ ನಮಗೂ ಬರಬಹುದು: ತೋಂಟದ ಶ್ರೀ

06:25 AM Dec 25, 2017 | Team Udayavani |

ಧಾರವಾಡ: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಪ್ರಾರಂಭವಾದಾಗಿನಿಂದ ನಿರಂತರವಾಗಿ ಸಾಕಷ್ಟು ಬೆದರಿಕೆಗಳು, ಒತ್ತಡಗಳು ಬರುತ್ತಿದೆ. ಬೆಳಗ್ಗೆ ವಾಯು ವಿಹಾರಕ್ಕೂ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಗದಗ ತೋಂಟದಾರ್ಯ ಸಂಸ್ಥಾನ ಮಠದ ಡಾ|ತೋಂಟದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

Advertisement

ನಗರದಲ್ಲಿ ನಡೆದ ಸಿದ್ದರಾಮೇಶ್ವರ ಮಾರ್ಗದರ್ಶಿಯ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಇಂತಹ ಸಂದರ್ಭದಲ್ಲಿ ಕೆಲವರು ವಿಚಿತ್ರ ನಡವಳಿಕೆ ಹಾಗೂ ಆಚರಣೆಗಳನ್ನು ಮಾಡುತ್ತಿದ್ದಾರೆ. ಸಂಶೋಧಕ ಎಂ.ಎಂ. ಕಲಬುರ್ಗಿ ಅವರಿಗೆ ಬಂದ ಪರಿಸ್ಥಿತಿ ನಮಗೂ ಬರುತ್ತದೆ ಏನೋ ಎನ್ನುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ. ವೀರಶೈವ ಲಿಂಗಾಯತ ಸ್ವತಂತ್ರ ಧರ್ಮವಾಗಲು ಎಂದಿಗೂ ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next