Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಂದಿಟ್ಟು ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಎಐಸಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು, ಅಲ್ಲಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲ ಎಂದು ದಬ್ಟಾಳಿಕೆ ನಡೆಸುತ್ತಿದೆ ಎಂದು ತಿಳಿಸಿದರು.
Related Articles
Advertisement
ಸಿದ್ದು, ಹರಿಪ್ರಸಾದ್ ದೆಹಲಿಗೆಈ ಮಧ್ಯೆ, ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ಹಾಗೂ ಮುಂದೆ ನಡೆಸಬೇಕಾದ ಹೋರಾಟದ ರೂಪುರೇಷೆ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಮಂಗಳವಾರ ಸಂಜೆ ದೆಹಲಿಗೆ ತೆರಳಿದ್ದು, ಶಾಸಕರು ಹಾಗೂ ಪರಿಷತ್ ಸದಸ್ಯರೂ ಹೋಗಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ದೆಹಲಿಯ ಎಐಸಿಸಿ ಕಚೇರಿ ಬಳಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಎಲ್.ಹನುಮಂತಯ್ಯ, ಮಖಂಡರಾದ ನಾಗರಾಜ್ ಛಬ್ಬಿ, ವಿನಯ್ ಕಾರ್ತಿಕ್ ಮತ್ತಿತರರು ಉಪಸ್ಥಿತರಿದದ್ದರು.