Advertisement

ಆಪರೇಶನ್ ಅಗತ್ಯವಿಲ್ಲ, ಯಾರನ್ನೂ ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ- HDK

05:26 AM Jan 16, 2019 | |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ‘ ಆಪರೇಶನ್’ನ ಅಗತ್ಯ ನಮಗಿಲ್ಲ. ನಾವು ಯಾವ ಶಾಸಕರನ್ನೂ ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. 

Advertisement

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಸಮ್ಮಿಶ್ರ ಸರಕಾರದಲ್ಲಿ ಅಗತ್ಯ ಸಂಖ್ಯಾಬಲವಿದೆ. ನಮಗೆ ಯಾವುದೇ ಆತಂಕವಿಲ್ಲ. ಎಲ್ಲವೂ ನಿಯಂತ್ರಣದಲ್ಲಿದೆ ಎಂದರು. 

3 ದಿನಗಳಿಂದ ಎಲ್ಲರ ಜೊತೆ ಮಾತಾಡಿದ್ದೇನೆ. ಎಲ್ಲಾ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ಹುಡುಗಾಟ ಆಡಕ್ಕಾಗುತ್ತಾ ? ಏನು ಮಾಡಬೇಕೆಂದು ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.   

ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next