Advertisement

ನಾವು ಜಾತಿ ಮೇಲೆ ರಾಜಕಾರಣ ಮಾಡಲ್ಲ, ನಮ್ಮದು ‘ನೀತಿ’ರಾಜಕಾರಣ: ಡಿ.ಕೆ.ಶಿವಕುಮಾರ್

02:40 PM Apr 08, 2021 | Team Udayavani |

ಬೆಳಗಾವಿ: ಕಾಂಗ್ರೆಸ್ ಪಕ್ಷ ಜಾತಿಯ ಮೇಲೆ ರಾಜಕೀಯ ಮಾಡುವುದಿಲ್ಲ. ಏನೇ ಇದ್ದರೂ ನಾವು ನೀತಿ ಮೇಲೆ ರಾಜಕಾರಣ ‌ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

Advertisement

ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನದ ಹಕ್ಕು ಹೊಂದಿರುವ ಲಿಂಗಾಯತರು ನಮ್ಮವರೇ. ಮರಾಠರು ನಮ್ಮ ಅಣ್ಣ-ತಮ್ಮಂದಿರಂತೆ. ನಮಗೆ ಎಲ್ಲರೂ ಒಂದೇ. ಆದರೆ ಬಿಜೆಪಿಯವರೇ ಅವರನ್ನು ಬೇರೆ ಬೇರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಕಮ್ಯುನಿಷ್ಟ್ ಪಕ್ಷಗಳ ನಾಯಕರು, ರೈತ ಸಂಘಟನೆಗಳನ್ನು ಸಂಪರ್ಕಿಸುತ್ತಿದ್ದೇನೆ. ನಮ್ಮ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ ಬೆಂಬಲ ನೀಡುವುದಾಗಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಇದನ್ನೂ ಓದಿ:ಕೋವಿಡ್ ಹೆಚ್ಚಳ: ಮಧ್ಯಪ್ರದೇಶದ ನಗರಗಳಲ್ಲಿ ಸಂಜೆ 6ರಿಂದ ಬೆಳಗ್ಗೆ 6ಗಂಟೆವರೆಗೆ ಲಾಕ್ ಡೌನ್

ದೆಹಲಿಯಲ್ಲಿ ನೂರಾರು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿ ಬಗ್ಗೆ ರೈತರಿಗೆ ಆಕ್ರೋಶವಿದೆ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಇದನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದ್ದೇವೆ ಎಂದು ಹೇಳಿದರು.

Advertisement

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ನೌಕರರ ಮುಷ್ಕರಕ್ಕೆ ನಾವು ಬೆಂಬಲ ಸೂಚಿಸಿದ್ದೇವೆ. ಸರ್ಕಾರ ಅವರೊಂದಿಗೆ ವರ್ತಿಸುತ್ತಿರುವ ರೀತಿ ಸರಿಯಲ್ಲ.‌ ಅವರ ನೋವು ಆಲಿಸಬೇಕು.‌ ಕೂಡಲೇ ನೌಕರರನ್ನು ಕರೆದು ಮಾತನಾಡಬೇಕು ಎಂದರು.

ಇದನ್ನೂ ಓದಿ:ಕೃಷಿ ವಿಜ್ಞಾನ ಕೇಂದ್ರದ 15 ಬಿಎಸ್ ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು!

ಬೆಳಗಾವಿ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ಎಂದಿದ್ದ ಸಚಿವ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿದ ಶಿವಕುಮಾರ ಶೆಟ್ಟರ್ ಗೆ ಮಾತನಾಡಲು ಶಕ್ತಿ ಕೊಟ್ಟಿದ್ದೇ ನಾವು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದ್ದೆ ನಾವು. ಅವರು ಹೀಗೆ ಮಾತನಾಡಲಿ ಎಂದು ಟಾಂಗ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next