Advertisement
ಪಟ್ಟಣದ ತೇರ ಬಜಾರದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ಹಾಗೂ ಕೇಂದ್ರ ಸರಕಾರದ ಓಬಿಸಿ ಮೀಸಲಾತಿಗಾಗಿ ಒತ್ತಾಯಿಸಿ ಹಮ್ಮಿಕೊಂಡ ಮೀಸಲಾತಿ ಹಕ್ಕೋತ್ತಾಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಸಾನ್ನಿಧ್ಯ ವಹಿಸಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಪಂಚಮಸಾಲಿ ಬಡ ಮಕ್ಕಳ ಶೆ„ಕ್ಷಣಿಕ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಮಾಜದ ಅಸ್ಮಿತೆಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಮೀಸಲಾತಿ ಹೋರಾಟ ರಾಮದುರ್ಗ ತಾಲೂಕಿನಿಂದ ಆರಂಭಿಸಿದ್ದೇವೆ. ಎಲ್ಲ ಸರಕಾರಗಳು ಕೇವಲ ಭರವಸೆಯ ಮಾತುಗಳನ್ನಾಡುತ್ತಿವೆ ವಿನಃ ಮೀಸಲಾತಿ ನೀಡುವ ಕೆಲಸ ಮಾಡುತ್ತಿಲ್ಲ. ಈಗಿನ ಮುಖ್ಯಮಂತ್ರಿಗಳು ಭರವಸೆ ಈಡೇರಿಸದಿದ್ದರೆ ಸಮುದಾಯದ ಮುಂದಿನ ನಿರ್ಧಾರಗಳನ್ನು ಎದುರಿಸಬೇಕಾಗುತ್ತದೆ ಎಂದು ಸಮಾವೇಶದ ಮೂಲಕ ಪರೋಕ್ಷ ಎಚ್ಚರಿಕೆ ನೀಡಿದರು.
ನ್ಯಾಯವಾದಿ ಪಿ.ಎಫ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರ್ಲಾಪೂರ ಢವಳೇಶ್ವರ ಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷ ಮಾರುತಿ ಕೊಪ್ಪದ, ಬಿ.ಎಫ್. ಬಸಿಡೋಣಿ, ಸಿ.ಬಿ. ಪಾಟೀಲ, ಶ್ರೀದೇವಿ ಮಾದನ್ನವರ, ಡಾ| ಬಸವರಾಜ ಪಾಟೀಲ, ಲಕ್ಷ್ಮೀ ಆರಿಬೆಂಚಿ ಸೇರಿದಂತೆ ಹಲವರು ಇದ್ದರು. ಜಿ.ಬಿ. ಪಾಟೀಲ ಸ್ವಾಗತಿಸಿದರು. ಸುಮಂಗಲಾ ಕಳಸಪ್ಪನವರ ನಿರೂಪಿಸಿ, ವಂದಿಸಿದರು.
ಬೃಹತ್ ಪ್ರತಿಭಟನಾ ರ್ಯಾಲಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಇಂದು ತಾಲೂಕಿನ ಎಲ್ಲೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಪಟ್ಟಣದ ವೆಂಕಟೇಶ್ವರ ದೇವಸ್ಥಾನದಿಂದ ಹುತಾತ್ಮ ಚೌಕ್, ಹಳೇ ಬಸ್‌ನಿಲ್ದಾಣ ಮುಂಭಾಗದಿಂದ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಅವರಿಗೆ ಮನವಿ ಸಲ್ಲಿಸಿದರು.