Advertisement

Loksabha; ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

02:27 PM Sep 08, 2023 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ಮುಖ್ಯಮಂತ್ರಿಗಳು ಮಾಧ್ಯಮದರಿಗೆ ಇಂದು ಪ್ರತಿಕ್ರಿಯೆ ನೀಡಿದರು.

ನಾವು ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next