Advertisement

ಶೆಟ್ಟರ್ ವಿಚಾರವು ಬಿಜೆಪಿ ‘ಡಿಎನ್ ಎ’ ಚಟುವಟಿಕೆಗೆ ಪೂರಕವಾಗಿದೆ: ಎಚ್ ಡಿ ಕುಮಾರಸ್ವಾಮಿ

01:17 PM Apr 16, 2023 | Team Udayavani |

ಬೆಳ್ತಂಗಡಿ: ಜಗದೀಶ್ ಶೆಟ್ಟರ್ ರಾಜೀನಾಮೆ ವಿಚಾರ ಅವರ ಪಕ್ಷದ ಆಂತರಿಕ ಬೆಳವಣಿಗೆ. ಅವರು ಅನುಭವಸ್ಥ ರಾಜಕಾರಣಿ. ನಾನು ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ ಡಿಎನ್ ಎ ಬಗ್ಗೆ ಮಾತನಾಡಿದ್ದೆ. ಅವರಂತವರೇ ಇಂತಹ ತೀರ್ಮಾನ ಮಾಡಿದ್ದಾರೆಂದರೆ ಆ ಡಿಎನ್ಎ ಇವತ್ತು ಅಲ್ಲಿಯ ಚಟುವಟಿಕೆಗೆ ಪೂರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಶೆಟ್ಟರ್ ಅವರು ನಿಮ್ಮನ್ನು ಸಂಪರ್ಕ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲ ನನ್ನನ್ನು ಯಾವುದೇ ಸಂಪರ್ಕ ಮಾಡಿಲ್ಲ, ಅಂತಹ ದೊಡ್ಡ ನಾಯಕರು ಅವಶ್ಯಕತೆ ಇಲ್ಲ. ಸಣ್ಣವರು ಯಾರಾದರೂ ಬಂದರೆ ತೆಗೆದುಕೊಳ್ಳುತ್ತೇವೆ. ಯಾಕೆಂದರೆ ನಮ್ಮದು ಸಣ್ಣ ಪಕ್ಷ. ಅಂತ ದೊಡ್ಡ ನಾಯಕರನ್ನು ನಾವು ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ, ಅಂತಹ ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ ಎಂದರು.

ಇದನ್ನೂ ಓದಿ:Jagadish shettar ಗೆ 3 ತಿಂಗಳ ಹಿಂದೆಯೇ ಪಕ್ಷದ ನಿರ್ಧಾರ ತಿಳಿಸಲಾಗಿತ್ತು: ಸಿಎಂ ಬೊಮ್ಮಾಯಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಇಂದು ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್.ಎಲ್ ಭೋಜೇ ಗೌಡ, ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ.ಬಿ.ಸದಾಶಿವ,‌ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅಧ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಎಚ್.ಎನ್. ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next