ಬೆಂಗಳೂರು: ಕಾಂಗ್ರೆಸ್ ಮೇಕಾದಾಟು ಪಾದಯಾತ್ರೆಯಿಂದ ನಮಗೆ ಯಾವುದೇ ಭಯವಿಲ್ಲ. ಜೆಡಿಎಸ್- ಕಾಂಗ್ರೆಸ್ ಗದ್ದಲದಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎನ್ನುವ ಭಯ ನಮಗೆ ಎಂದು ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆ ಒಂದು ದೊಂಬರಾಟ. ಸಿದ್ದರಾಮಯ್ಯ ಸಿಎಂ, ಡಿಕೆಶಿ ನೀರಾವರಿ, ಪವರ್ ಮಿನಿಸ್ಟರ್ ಆಗಿದ್ದರು. ಆಗ ಕಡಲೆಕಾಯಿ ತಿನ್ನತಿದ್ರು, ಈಗ ಮೇಕೆ ಮಾಂಸ ತಿನ್ನಲು ಚುನಾವಣೆ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಯಾಕೆ ಮೇಕೆದಾಟು ಯೋಜನೆ ಮಾಡಲಿಲ್ಲ.ರಾಜ್ಯದಲ್ಲಿ 6 ವರ್ಷ ಕಾಂಗ್ರೆಸ್ ಸರ್ಕಾರ ಇದ್ದಾಗ ಯಾಕೆ ಯೋಜನೆ ಬಗ್ಗೆ ಯೋಚನೆ ಮಾಡಲಿಲ್ಲ. ಅಧಿಕಾರವಿದ್ದಾಗ ಏನೂ ಮಾಡದೆ ಈಗ ಮೇಕೆದಾಟು ನಂದು ಅಂತ ಹೇಳಿಕೊಂಡು ಓಡಾಡ್ತಿದ್ದಾರೆ ಎಂದು ಅಶೋಕ್ ಹೇಳಿದರು.
ಇದನ್ನೂ ಓದಿ:ವಿಜಯಪುರ: ಕಾಂಗ್ರೆಸ್ ಮೇಲುಗೈ, ಖಾತೆ ತೆರೆದ ಓವೈಸಿಯ ಎಂಐಎಂ
ನಮ್ಮ ಸರ್ಕಾರ ಇದೆ. ಸಿಎಂ ಬೊಮ್ಮಾಯಿ ಈಗಾಗಲೇ ಕೇಂದ್ರದ ಜಲ ಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ನಾವು ಮೇಕೆದಾಟು ಯೋಜನೆ ಮಾಡಲು ಪ್ರಯತ್ನ ನಡೆಸಿದ್ದೇವೆ ಎಂದರು.