Advertisement

ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ನಮ್ಮ ವಿರೋಧವಿಲ್ಲ,ಆದರೆ…: ಸಿದ್ದರಾಮಯ್ಯ

02:43 PM Jan 06, 2023 | Team Udayavani |

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಲು ನಮ್ಮ ವಿರೋಧವಿಲ್ಲ. ಆದರೆ ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

Advertisement

ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಲು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದೆಂಬುದೆ ನಮ್ಮ ವಿರೋಧ. ಪ್ರತಿ ಹಳ್ಳಿಯಲ್ಲಿ ಆಂಜನೇಯ ಮಂದಿರಗಳಿವೆ. ನಾವು ಅವನ್ನು ಕಟ್ಟಿಲ್ಲವೇ? ಆದರೆ ಅದರಲ್ಲಿ ರಾಜಕಾರಣ ಮಾಡಬಾರದು ಎಂದರು.

ಕೋಮುವಾದ ಮಾಡುವ ಯಾವುದೇ ಪಕ್ಷಗಳು ಜನರನ್ನು ಆಳಲು ಯೋಗ್ಯವಲ್ಲ. ಧರ್ಮ ಹಾಗೂ ಜಾತಿ ಹೆಸರಲ್ಲಿ ರಾಜಕೀಯ ಮಾಡಿದರೇ ಅದು ತಪ್ಪು. ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಧರ್ಮಗಳು ಸಮವಾಗಿವೆ. ಇವುಗಳ ಹೆಸರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ನಾನು ಹಿಂದೂ ವಿರೋಧಿಯಲ್ಲ. ಆದರೆ ಹಿಂದುತ್ವದ ವಿರೋಧಿಯಾಗಿದ್ದೇನೆ ಎಂದರು.

1925ರಿಂದ 47ರ ವರೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಯಾವೊಬ್ಬ ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾದವರು ಭಾಗವಹಿಸಿಲ್ಲ. ಆ ಸಮಯದಲ್ಲಿ ಸ್ವಾತಂತ್ರ್ಯ ಹೋರಾಟ ಗಂಭೀರ ಸ್ವರೂಪದಲ್ಲಿತ್ತು. ಆಗ ಆರ್ ಎಸ್ಎಸ್ ಸಂಸ್ಥಾಪಕರಾಗಲಿ, ಪದಾಧಿಕಾರಿಗಳಾಗಲಿ ಯಾರಾದರೂ ಅದರಲ್ಲಿ ಭಾಗಿಯಾಗಿದ್ದರೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅವಹೇಳನ ಮಾಡಲೆಂದು ನಾಯಿ ಮರಿ ಎಂದು ಹೇಳಿಲ್ಲ. ರಾಜ್ಯದ ಹಿತದೃಷ್ಟಿಯಿಂದ ಪ್ರಧಾನಿ ಬಳಿ ಅನುದಾನವನ್ನು ಧೈರ್ಯವಾಗಿ ಕೇಳಿ ಎಂದು ಹಳ್ಳಿಯ ಭಾಷೆಯಲ್ಲಿ ಹಾಗೇ ಹೇಳಿದ್ದೇನೆ. ಹಾಗಾದರೆ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜಾಹುಲಿ ಅನ್ನುತ್ತಾರೆ. ನನಗೆ ಟಗರು ಮತ್ತು ಹೌದ ಹುಲಿಯಾ ಅನ್ನುತ್ತಾರೆ ಅದನ್ನು ತಪ್ಪಾಗಿ ಅರ್ಥೈಸಿಕೊಂಡರೆ ಹೇಗೆ ಎಂದು ಪ್ರಶ್ನಿಸಿದರು.

Advertisement

ವಿಧಾನಸೌಧಕ್ಕೆ ಇಂಜಿನಿಯರ್ ವೊಬ್ಬರು ಅಲ್ಲಿಗೆ ಏಕೆ ಹಣ ತಂದಿದ್ದರು. ಸಿಎಂ ಅಥವಾ ಯಾವುದಾದರೂ ಮಂತ್ರಿಗೆ ಲಂಚ ಕೊಡಲು ಹೋದರು ಹೋಗಿರಬಹುದು. ಆ ಬಗ್ಗೆ ಸಮಗ್ರ ತನಿಖೆ ನಡೆಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next