Advertisement
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು ಬೈಬಲ್ ಅನ್ನು ಕಲಿಸಬಹುದು, ಈ ಕ್ರಮವನ್ನು ನಾವು ವಿರೋಧಿಸುವುದಿಲ್ಲ. ಪ್ರಸ್ತುತ ಗುಜರಾತ್ ಸರ್ಕಾರವು ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಕೈಗೊಳ್ಳಬೇಕಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ನಮ್ಮ ಆದ್ಯತೆ. ನೈತಿಕ ಶಿಕ್ಷಣ ನೀಡುವುದು ಅವಶ್ಯಕ. ಆದರೆ ಅದು ಸಂವಿಧಾನಕ್ಕೆ ವಿರುದ್ಧವಾಗಿರಬಾರದು” ಎಂದಿದ್ದಾರೆ.
Related Articles
Advertisement
ಹಿಜಾಬ್ ಕುರಿತಾಗಿನ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ, ಕೋರ್ಟ್ ತೀರ್ಪು ವಿರೋಧಿಸಬಾರದು. ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಸಮಾನವಾಗಿ ಕಾಣುವ ಕೆಲಸ ಆಗಬೇಕು ಎಂದರು.