Advertisement

ವಿದ್ಯುತ್ ದರ ನಾವು ಏರಿಸಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

12:05 PM Jun 13, 2023 | Team Udayavani |

ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಪ್ರಸ್ತಾವನೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ‌ ಇದೀಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ಸಂತೆ ಏರಿಕೆ ಮಾಡಿದ್ದು, ದರ ಹೆಚ್ಚಳ ಮಾಡಿದ್ದು ನಮ್ಮ ಸರಕಾರವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ‌. ಆದರೆ ಏರಿಕೆಯನ್ನು ನಮ್ಮ ಸರಕಾರದ ಮೇಲೆ ಹಾಕುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸರಕಾರದ ಗ್ಯಾರಂಟಿಗಳ ಬಗ್ಗೆ ಕಾದು ನೋಡುತ್ತಿದ್ದೇವೆ. ಉಚಿತ ಪ್ರಯಾಣ ಆರಂಭದ ಶೂರತ್ವ ಆಗಿದೆ. ಮಹಿಳೆಯರು ಓಡಾಡಲು ಬಸ್ಸುಗಳೇ ಇಲ್ಲ‌. ಸಾರಿಗೆ ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಡಿಸೇಲ್ ಬಳಕೆ ಮಾಡುತ್ತಿವೆ. ಡಿಸೇಲ್ ದರ ಏರಿಕೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸುವಂತೆ ಆಗಿತ್ತು. ಇವುಗಳ ನೆರವಿಗೆ ನಮ್ಮ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಇದನ್ನು ಈ ಸರಕಾರ ಮುಂದುವರಿಸಿಕೊಂಡು ಹೋಗಬೇಕು. ಇನ್ನೂ ಗ್ಯಾರಂಟಿಗಳಿಗೆ ಹಣಕಾಸಿನ ಬಗ್ಗೆ ಸ್ಪಷ್ಟತೆ ನೀಡುತ್ತಿಲ್ಲ. ಜನರನ್ನು ಕತ್ತಲೆಯಲ್ಲಿ ಇಡುವ ಕೆಲಸ ಈ ಸರಕಾರ ಮಾಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದ ಕಾರಣ ರೈತರಿಗೆ ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಮತ್ತೊಂದು ಕಡೆ ಭೀಕರ ಚಂಡ ಮಾರುತದ ಮಾತುಗಳು ಕೇಳಿ ಬರುತ್ತಿವೆ. ಹೀಗಿದ್ದರೂ ಮುಖ್ಯಂಮತ್ರಿಗಳು ಯಾವ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ರಾಜ್ಯದ ಡ್ಯಾಂ ಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಎಂದು ಹೇಳಲ್ಲ. ಮುನ್ನೆಚ್ವರಿಕಾ ಕ್ರಮವಾಗಿ ಸರ್ಕಾರದ ಸಮರ್ಪಕವಾಗಿ ಯೋಜನೆ ರೂಪಿಸಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಆ ಟಾಸ್ಕ್ ಫೋರ್ಸ್ ನಲ್ಲಿರಬೇಕು ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next