Advertisement

PM Modi ಸಾಧನೆ ಬ್ರಹ್ಮಾಸ್ತ್ರ ನಮ್ಮಲ್ಲಿದೆ: ಬಿ.ವೈ.ವಿಜಯೇಂದ್ರ

11:20 PM Mar 25, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ-ಜೆಡಿಎಸ್‌ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.

Advertisement

ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾ ಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು ಮತ್ತು ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದರು.

ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಟಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅಗತ್ಯ. ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯ ರೂಪಿಸಲಿದೆ. ಬಿಜೆಪಿ- ಜೆಡಿಎಸ್‌ ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ ಎಂದರು.

ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿಪಕ್ಷಗಳು ತೀರ್ಮಾನಿಸಿವೆ. ಆದರೂ ನಾವು ಚುನಾವಣೆಯನ್ನು ಗಂಭೀರವಾಗಿ ಸ್ವೀಕರಿಸಬೇಕು. ಎಲ್ಲ 58 ಸಾವಿರ ಬೂತ್‌ಗಳನ್ನು ನೇರವಾಗಿ ತಲುಪಬೇಕಿದೆ. ಮೋದಿಯವರ ಜನಪ್ರಿಯತೆ ಮತ್ತು ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ ಎಂದು ಕರೆ ನೀಡಿದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರ ಪಡೆದಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ವಿಶ್ಲೇಷಣೆಗಳನ್ನು ಕಾಂಗ್ರೆಸ್‌ ಜನರ ಮುಂದಿಟ್ಟಿತ್ತು. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು ಎಂದರು.
ಮಾಜಿ ಸಚಿವ ಸಿ.ಟಿ.ರವಿ, ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ಪ್ರೀತಂ ಗೌಡ, ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯಕ್‌, ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್‌.ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್‌ ಕೆಡೆಂಜಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next