Advertisement
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕರ ಆತ್ಮಸಾಕ್ಷಿ ಮತಗಳು ಕಾಂಗ್ರೆಸ್‌ಗೆ ಬರುತ್ತವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರೊಬ್ಬರಿಗೆ ಆತ್ಮಸಾಕ್ಷಿ ಇರೋದಾ, ನಮಗ್ಯಾರಿಗೂ ಇಲ್ವಾ? ಆತ್ಮಸಾಕ್ಷಿ ಯನ್ನು ಅವರೊಬ್ಬರಿಗೇ ಗುತ್ತಿಗೆ ಕೊಟ್ಟಿದ್ದೇವಾ ಎಂದು ಅಸಮಾಧಾನ ಹೊರಹಾಕಿದರು.
ಕಳೆದ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಅಲ್ಲ, ಬಿಜೆಪಿಯೂ ಎಚ್.ಡಿ.ದೇವೇಗೌಡರ ವಿರುದ್ಧ ಅಭ್ಯರ್ಥಿ ಹಾಕಿರಲಿಲ್ಲ. ಈ ಸಂಬಂಧ ಕಾಂಗ್ರೆಸ್ಸಿಗೂ ಮೊದಲೇ ಬಿಜೆಪಿ ತೀರ್ಮಾನ ಕೈಗೊಂಡಿತ್ತು. ಬಿಜೆಪಿ ತೀರ್ಮಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲ ಎಂದು ಹೇಳಿತು. ಅಯ್ಯೋ ಪಾಪ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೀರಿ. ಸಿದ್ದರಾಮಯ್ಯ ನಿಮ್ಮನ್ನು ಸೋಲಿಸಿದ್ದಾರೆ, ಈಗ ನಿಮ್ಮನ್ನು ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಅರ್ಜಿ ಇಟ್ಟುಕೊಂಡು ಬಂದಿರಲಿಲ್ಲ ಎಂದು ತಿರುಗೇಟು ನೀಡಿದರು.