Advertisement

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

09:37 PM Jun 26, 2024 | Team Udayavani |

ಬೆಂಗಳೂರು: ರೇಣುಕಾಸ್ಚಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

Advertisement

ಖ್ಯಾತ ನಟರೊಬ್ಬರು ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಎ1 ಪವಿತ್ರಾ, ಎ2 ದರ್ಶನ್ ಸೇರಿದಂತೆ ಇತರೆ ಆರೋಪಗಳನ್ನು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇತ್ತ ದರ್ಶನ್ ಅವರ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ಈ ವಿಚಾರ ಆಘಾತವನ್ನು ನೀಡಿದೆ. ಪುತ್ರ ವಿನೀಶ್ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು. ಪತ್ನಿ ವಿಜಯಲಕ್ಷ್ಮೀ ಕುಗ್ಗಿ ಹೋಗಿದ್ದಾರೆ. ಕೆಲ ದಿನಗಳ ಕಾಲ ಸಾಮಾಜಿಕ ಜಾಲತಾಣದಿಂದಲೂ ದೂರ ಉಳಿದಿದ್ದರು.

ಎಷ್ಟೇ ಮುನಿಸು ಇದ್ದರೂ ಗಂಡನೆಂಬ ಕಾರಣದಿಂದ ಇತ್ತೀಚೆಗಷ್ಟೇ ಜೈಲಿಗೆ ಹೋಗಿ ಪತಿ ದರ್ಶನ್ ಅವರನ್ನು ಭೇಟಿಯಾಗಿ ಬಂದಿದ್ದರು. ಇದೀಗ ದರ್ಶನ್ ಅವರು ಈ ಪ್ರಕರಣ ಆರೋಪಿಯಾದ ಬಳಿಕ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಅಭಿಮಾನಿಗಳು ಶಾಂತ ಹಾಗೂ ತಾಳ್ಮೆಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ.

Advertisement

ಪೋಸ್ಟ್ ನಲ್ಲಿ ಏನಿದೆ..

ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ” ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮಯದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ”  ಎಂದು ಬರೆದುಕೊಂಡಿದ್ದಾರೆ.

ಸದ್ಯ ವಿಜಯಲಕ್ಷ್ಷೀ ಅವರ ಈ ಪೋಸ್ಟ್ ವೈರಲ್ ಆಗಿದೆ. ದರ್ಶನ್ ಅಭಿಮಾನಿಗಳ ವಲಯದಲ್ಲಿ ಪೋಸ್ಟ್ ಹರಿದಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next