Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದೆ. ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಅಲ್ಲಿಗೆ ಹೋದವರು ತಿಳಿಸಿದ್ದರು. ಆದರೆ, ಅಲ್ಲಿ ಕಳೆದ ಚುನಾವಣೆಗಿಂತ ಈ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಪಡೆದುಕೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವಕ್ಕೆ ಅಲ್ಲಿನ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಭಾವವಿದ್ದರೆ, ಕಾಂಗ್ರೆಸ್ ಸಂಪೂರ್ಣವಾಗಿ ಸೋಲಬೇಕಿತ್ತಿಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಪಕ್ಷ ಬಿಟ್ಟು ಹೋಗಿದ್ದು ಪರಿಣಾಮ ಬೀರಿದೆ. ಗುಜರಾತ್‌ನಲ್ಲಿ ಪ್ರಾದೇಶಿಕ ಮಟ್ಟದ ನಾಯಕರ ಅವಶ್ಯಕತೆ ಇದೆ ಎಂದರು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಹೀಗಾಗಿ, ಗುಜರಾತ್ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. 2018ರ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ. ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಅವರಿಗೆ ಕೊಡುಗೆಯಾಗಿ ನೀಡಲಾಗುವುದು ಎಂದರು.