ಮುಂಬೈ: ಸದಾ ಕಾಂಟ್ರೋವರ್ಸಿ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ, ಇದೀಗ ಮತ್ತೊಂದು ವಿವಾದ ಮೈಮೇಲೆಳೆದುಕೊಂಡಿದ್ದಾರೆ.
ಬಿಟೌನ್ ಬೋಲ್ಡ್ ಲೇಡಿ ಕಂಗನಾ, ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜನಸಂಖ್ಯೆ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಬೇಕು. ವೋಟ್ ರಾಜಕಾರಣದಿಂದ ಬೇಸತ್ತು ಹೋಗಿದ್ದೇವೆ. ಈ ಸಮಸ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಬಲವಂತವಾಗಿ ಜನರ ಸಂತಾನಶಕ್ತಿ ಹರಣಗೊಳಿಸಲು ಮುಂದಾಗಿದ್ದರು. ಆದರೆ ಬಳಿಕ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಇಂದಿನ ಬಿಕ್ಕಟ್ಟನ್ನು ಗಮನಿಸಿದಾಗ ಕನಿಷ್ಠ ಮೂರನೇ ಮಗು ಹೊಂದಿದರೆ ದಂಡ ಅಥವಾ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂದಿದ್ದಾರೆ.
ಇನ್ನು ಇತ್ತೀಚಿಗಷ್ಟೆ ರಂಜಾನ್ ಹಬ್ಬಕ್ಕೆ ಜನ ಸೇರುವುದನ್ನು ನಿಷೇಧಿಸಬೇಕೆಂದು ಪ್ರಧಾನಿ ಮೋದಿ ಅವರಿಗೆ ಕಂಗಾನ ಒತ್ತಾಯಿಸಿದ್ದರು. ಅವರ ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಇದೀಗ ಮೂರನೇ ಮಗು ಹೊಂದಿದರೆ ಜೈಲಿಗಟ್ಟಬೇಕೆಂದು ಹೇಳಿರುವುದು ಕೂಡ ಸಾಕಷ್ಟು ಟೀಕೆಗೆ ಒಳಗಾಗಿದೆ.