ಬೆಂಗಳೂರು : ಕಾಶ್ಮೀರದ ಲಾಲ್ ಚೌಕ್, ರಾಜ್ಯದ ಈದ್ಗಾ ಮೈದಾನದಲ್ಲಿ ಮತೀಯ ಕೇಂದ್ರಿತ ವಿರೋಧದ ನಡುವೆಯೂ ತ್ರಿವರ್ಣ ಧ್ವಜ ಹಾರಿಸಿದವರು ನಾವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿದ್ದಾರೆ.
ತ್ರಿವರ್ಣ ಧ್ವಜದ ಗೌರವಕ್ಕಾಗಿ ಹೋರಾಡಿದ ಪಕ್ಷ ನಮ್ಮದು. . ಕಾಂಗ್ರೆಸ್ ಪಕ್ಷ ಮತೀಯ ಭಾವನೆಯನ್ನು ಕೆರಳಿಸುವ ಕೆಲಸ ಮಾಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿರುವ ವಿಡಿಯೋವನ್ನು ಬಿಜೆಪಿ ಪೋಸ್ಟ್ ಮಾಡಿದೆ.
ಕಾಂಗ್ರೆಸ್ ಪಕ್ಷ ದೇಶದ ಜನರಲ್ಲಿ ಅಭದ್ರತೆ ಮೂಡಿಸುತ್ತಿದೆ. ಕಾಂಗ್ರೆಸ್ ಕೋಮು ಸೌಹಾರ್ದವನ್ನು ಕೆಡಿಸುತ್ತಿದೆ. ಕಾಂಗ್ರೆಸ್ ಸೃಷ್ಟಿಸಿದ ಹಿಜಾಬ್ ವಿವಾದದ ಹಿಂದೆ ದೇಶದ ಗೌರವವನ್ನು ಕಡಿಮೆಗೊಳಿಸುವ ಹುನ್ನಾರವಿದೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಭಾರತದ ತ್ರಿವರ್ಣ ಧ್ವಜ ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎನ್ನುವ ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಭಾರತದ ತ್ರಿವರ್ಣ ಧ್ವಜ ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎನ್ನುವ ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಕಿಡಿ ಕಾರಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ತ್ರಿವರ್ಣ ಧ್ವಜ ಕೆಳಗಿಳಿಸಿ ಭಗವಾಧ್ವಜ ಹಾರಿಸಿರುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಸಮರ ನಡೆಯುತ್ತಿದೆ.