Advertisement

“ಇನ್ನು ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು”: ಉದಯನಿಧಿ ಸ್ಟಾಲಿನ್

08:13 AM Mar 24, 2024 | Team Udayavani |

ಚೆನ್ನೈ: ಬಿಜೆಪಿ ನೇತೃತ್ವದ ಕೇಂದ್ರದ ನಿಧಿ ಹಂಚಿಕೆಯ ವಿರುದ್ಧ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಶನಿವಾರ(ಮಾ.23 ರಂದು) ವಾಗ್ದಾಳಿ ನಡೆಸಿದ್ದಾರೆ.

Advertisement

ರಾಮನಾಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇವಲ 28 ಪೈಸೆಗಳನ್ನು ಮಾತ್ರ ಕೇಂದ್ರ ರಾಜ್ಯಕ್ಕೆ ಪಾವತಿಸಿದೆ. ಬಿಜೆಪಿ ಆಡಳಿತದ ರಾಜ್ಯಗಳು ಇದಕ್ಕಿಂತ ಹೆಚ್ಚು ಹಣವನ್ನು ಪಡೆಯುತ್ತವೆ ಎಂದು ಆರೋಪಿಸಿದ್ದಾರೆ.

“ಇನ್ನು ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು” ಎಂದು ಸ್ಟಾಲಿನ್‌ ವ್ಯಂಗ್ಯವಾಡಿದರು.

ತಮಿಳುನಾಡಿನಲ್ಲಿ ಮಕ್ಕಳ ಭವಿಷ್ಯವನ್ನು ನಾಶಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ತಂದಿದ್ದಾರೆ. ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್‌ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡು ವಿರುದ್ಧ ತಾರತಮ್ಯ ಮಾಡಲಾಗಿದೆ ಎಂದರು.

ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

Advertisement

39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next