Advertisement

ಕೋರ್ಟ್ ಏನೇ ತೀರ್ಪು ಬಂದರೂ ನಾವು ತಲೆ ಬಾಗಬೇಕು: ಆರಗ ಜ್ಞಾನೇಂದ್ರ

09:48 AM Mar 15, 2022 | Team Udayavani |

ಬೆಂಗಳೂರು: ಹಿಜಾಬ್ ಕುರಿತಾಗಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾವು ತಲೆ ಬಾಗಬೇಕು. ಕೋರ್ಟ್, ಸಂವಿಧಾನದ ವಿರುದ್ಧ ನಾವು ಏನು ಮಾಡಲು ಆಗವುದಿಲ್ಲ. ಕೋರ್ಟ್ ತೀರ್ಪಿಗೆ ನಾವು ಗೌರವ ನೀಡೋಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಆರ್ ಟಿ ನಗರ ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನತೆ ಶಾಂತಿಪ್ರೀಯರು. ಯಾವುದೇ ಅಹಿತಕರ ಘಟನೆಗಳು ನಡೆಯುವುದಿಲ್ಲವೆಂದು ನಾನು ಭಾವಿಸುತ್ತೇನೆ. ಕೆಲವೊಂದು ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಎಸ್ ಪಿಗಳು ಹಿರಿಯ ಪೊಲೀಸ್ ಅಧಿಕಾರಿಗಳು ಫೀಲ್ಡ್ ನಲ್ಲಿರಲು ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ:ಹಿಜಾಬ್ ತೀರ್ಪು ಹಿನ್ನೆಲೆ: ವಿಜಯಪುರ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ

ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತಾದ ತೀರ್ಪನ್ನು ರಾಜ್ಯ ಹೈಕೋರ್ಟ್ ಇಂದು ಪ್ರಕಟಿಸಲಿದೆ. ಸತತ 11 ದಿನಗಳ ಕಾಲ ಸುದೀರ್ಘ‌ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಫೆ.25ರಂದು ತೀರ್ಪು ಕಾಯ್ದಿರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next