Advertisement

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

02:23 PM Apr 12, 2024 | Team Udayavani |

ಗದಗ: ಬಿಜೆಪಿಯಿಂದ ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಹೇಳಿರುವ ಹರಿಹರ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಸಲಾಗುವುದು. ಸ್ವಾಮೀಜಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಶ್ರೀಗಳು ಸಮಾಜದ ಬಗ್ಗೆ ಕಳಕಳಿಯಿಂದ ಮಾತನಾಡಿದ್ದಾರೆ. ಅವರ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾನು ನಿರಂತರವಾಗಿ ವಚನಾನಂದ ಶ್ರೀಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದರು.

ಇದೇ ವೇಳೆ ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ತದಿಂದ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ಮಾಹಿತಿ ಇಲ್ಲ ಎಂದರು.

ದೊಡ್ಡ ಬೆಂಬಲ ಸಿಗುತ್ತಿದೆ: ನನಗೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ. ನನಗೆ ಹಳ್ಳಿಗಳ ಸಂಪರ್ಕವಿದೆ. ಜನರ ಪ್ರೀತಿ ವಿಶ್ವಾಸ. ನನಗೂ ಪ್ರೀತಿ ಇದೆ. ಯಾವುದೇ ಸಮಯ ವ್ಯರ್ಥ ಮಾಡದೇ ಪ್ರಚಾರ ಮಾಡುತ್ತಿದ್ದೇನೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಪ್ರಚಾರವಾಗುತ್ತಿದೆ ಎಂದರು.

ಹಾವೇರಿ-ಗದಗ ಕ್ಷೇತ್ರದಲ್ಲಿ ಮೋದಿ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಬಗ್ಗೆ ಕೇಂದ್ರ ಪ್ರಚಾರ ಸಮಿತಿಯವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

Advertisement

ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವೈ. ಮುಧೋಳ, ಮುಖಂಡ ಡಾ. ಶೇಖರ ಸಜ್ಜನರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next