Advertisement
ಮಾರಿಷಸ್ ದೇಶದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪೃಥ್ವಿರಾಜ್ ಸಿಂಗ್ ರೂಪುನ್ ಮತ್ತು ಪ್ರಧಾನಮಂತ್ರಿಗಳಾದ ಶ್ರೀ ಪ್ರವೀಣ್ ಕುಮಾರ್ ಜಗನ್ನಾಥ್ ರವರು ಗುರುದೇವರನ್ನು ಆದರದಿಂದ ಸ್ವಾಗತಿಸಿದರು.
Related Articles
Advertisement
ಈ ಪುನಶ್ಚೇತನ ಕಾರ್ಯಕ್ರಮಗಳು ಕೈದಿಗಳ ಭಾವನಾತ್ಮಕ ಒತ್ತಡವನ್ನು ನಿವಾರಿಸಿ, ಹಿಂಸಾಪ್ರವೃತ್ತಿಯಿಂದ ಹೊರಬಂದು ಕೈದಿಗಳು ಮತ್ತೆ ಸಮಾಜದ ಮುಖ್ಯವಾಹಿನಿಗೆ ಸೇರುವಂತೆ ಮಾಡುತ್ತದೆ. ಗುರುದೇವರು ಇದರ ಬಗ್ಗೆ ಮಾತನಾಡುತ್ತಾ, “ಅವರಲ್ಲಿರುವ ನಿಕೃಷ್ಟವಾದ ಗುಣಗಳಿಂದಾಗಿ ಅವರು ಕಾರಾಗೃಹಕ್ಕೆ ಬಂದರು, ಆದರೆ ಆಧ್ಯಾತ್ಮಿಕತೆಯು ಅವರಲ್ಲಿರುವ ಅತ್ಯುತ್ತಮ ಗುಣಗಳನ್ನು ಹೊರತರುತ್ತದೆ. ಅವರು ಒಳ್ಳೆಯ ನಾಗರಿಕರಾಗಿ, ಸಮಾಜಕ್ಕೆ ಸಕಾರಾತ್ಮಕವಾದ ರೀತಿಯಲ್ಲಿ ಕಾಣಿಕೆಯನ್ನು ನೀಡುತ್ತಾರೆ” ಎಂದು ಹೇಳಿದರು.
ಗುರುದೇವರ ಪ್ರಥಮ ದಿನದ ಭೇಟಿಯಂದು ನಡೆದ ಸಾರ್ವಜನಿಕ ಸಂಜೆಯಲ್ಲಿ ಜ್ಞಾನ, ಸತ್ಸಂಗ ಹಾಗೂ ಧ್ಯಾನ ನಡೆಯಿತು. ಈ ಸಭೆಯಲ್ಲಿ ಮಾರಿಷಸ್ ನ ಸಾವಿರಾರು ಜನರು ಭಾಗವಹಿಸಿದ್ದಲ್ಲದೆ, ಸನ್ಮಾನ್ಯ ಅಧ್ಯಕ್ಷರು, ವಿಪಕ್ಷದ ನಾಯಕರು, ಹಾಗೂ ಪ್ರಮುಖ ಸರ್ಕಾರಿ ಅಧಿಕಾರಿಗಳೂ ಭಾಗವಹಿಸಿದ್ದರು. ಸಭೆಗೆ ಆಗಮಿಸಿದ್ದ ಇತರ ಗಣ್ಯರೆಂದರೆ ಶ್ರೀ ಅಡ್ರೇನ್ ದುವಲ್, ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್, ಭಾರತದ ದೂತಾವಾಸದ ಕಮಿಷನರ್ ಆದ ಶ್ರೀಮತಿ ನಂದಿನಿ ಸಿಂಗ್ಲಾ, ಮಾರಿಷಸ್ ನ ಮಾಜಿ ಅಧ್ಯಕ್ಷರ ಪತ್ನಿಯಾದ ಶ್ರೀಮತಿ ಸರೋಜಿನಿ ಜಗನ್ನಾಥ್, ವಿಪಕ್ಷ ನಾಯಕರಾದ ಅರವಿಂದ್ ಬೂಲೆಲೀ, ಶ್ರೀ ಅಲನ್ ಗಣೂ, ವಿದೇಶಾಂಗ ಸಚಿವರು, ಸಾರ್ವಜನಿಕ ಸೌಲಭ್ಯಗಳ ಸಚಿವರಾದ ಶ್ರೀ ಬಾಬ್ಬಿ ಹುರೀರಾಮ್, ನಾಗರಿಕ ಸೇವಗಳ ಸಚಿವರಾದ ಶ್ರೀ ಅಂಜೀವ್ ರಾಮ್ಧಾನ್, ಸಹಕಾರ ಸಚಿವರಾದ ನವೀನ್ ರಾಮಯ್ಯೆಡ್ ಮತ್ತು ಆರೋಗ್ಯ ಹಾಗೂ ವೆಲ್ನೆಸ್ ನ ಸಚಿವರಾದ ಶ್ರೀ ಕೈಲಾಶ್ ಜಗತ್ಪಾಲ್. ತಮ್ಮ ನಾಲ್ಕು ದಿವಸಗಳ ಭೇಟಿಯಲ್ಲಿ ಗುರುದೇವರು ಅನೇಕ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜ್ಞಾನ, ಸಂಗೀತ ಹಾಗೂ ಸತ್ಸಂಗದ ಕಾರ್ಯಕ್ರಮಗಳು ಪೈಲ್ಲಿಸ್, ಗೂಡ್ಲ್ಯಾಂಡ್ಸ್ ಮತ್ತು ವೂಟಾನ್ ನಲ್ಲೂ ನಡೆಯಲಿದೆ.