Advertisement

ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆ ತರುತ್ತೇವೆ: ಎಂ.ಬಿ. ಪಾಟೀಲ್

03:43 PM Jul 16, 2021 | Team Udayavani |

ಬೆಳಗಾವಿ: ಬಿಎಸ್‌ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ನಿಶ್ಚಿತವಾಗಿ ಕಾಂಗ್ರೆಸ್ ಗೆ ಕರೆ ತರುತ್ತೇವೆ ಎಂದು ಎಂ.ಬಿ. ಪಾಟೀಲ್ ಹೇಳಿದರು.

Advertisement

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಲ್ಲಿ ಯಡಿಯೂರಪ್ಪ ಬಹಳ ಎತ್ತರದ ನಾಯಕರು. ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೂ ಪ್ರಕಾಶ್ ಹುಕ್ಕೇರಿ, ಎ.ಬಿಪಾಟೀಲ್‌ ರಂತಹ ಹಿರಿಯ ಲಿಂಗಾಯತ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ನಾಯಕರಿಗೆ ಸ್ಥಾನಮಾನ ನೀಡುವ‌ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ:ದರ್ಶನ್- ಇಂದ್ರಜಿತ್ ಪ್ರಕರಣದಲ್ಲಿ ನನ್ನ ಹೆಸರು ತಳಕು ಹಾಕುವ ಕೆಲಸ ಮಾಡಬೇಡಿ: ಕುಮಾರಸ್ವಾಮಿ

ವೀರೇಂದ್ರ ಪಾಟೀಲ್‌ ರಿದ್ದಾಗ ಕಾಂಗ್ರೆಸ್ 180 ಸೀಟ್ ಪಡೆದುಕೊಂಡಿತ್ತು. ವೀರೇಂದ್ರ ಪಾಟೀಲ್‌ ರ ಬಳಿಕ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ಅದನ್ನು ಮರಳಿ ಪಡೆಯಲು ಎಲ್ಲಾ ನಾಯಕರು ಒಗ್ಗೂಡಿ ಸಾಮೂಹಿಕವಾಗಿ ಪ್ರಯತ್ನ ಮಾಡುತ್ತೇವೆ. ಹಿರಿಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಕರೆತರುವ ಕೆಲಸ ನಡೆಯಲಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ಸಮುದಾಯದ ನಾಯಕರಿಗೆ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಈಗಾಗಲೇ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ, ವೇಣುಗೋಪಾಲ್ ಜೊತೆ ಮಾತನಾಡಿದ್ದೀವಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಯೂ ಮಾತ‌ನಾಡುತ್ತೇನೆ. ಲಿಂಗಾಯತ ಸಮುದಾಯಕ್ಕೂ ಪ್ರಾತಿನಿಧ್ಯ ಸಿಗಬೇಕು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next