Advertisement

ತಮಿಳುನಾಡು ನಿರ್ಧಾರದ ಬಗ್ಗೆ ಮಾತನಾಡಲ್ಲ, ನಾವು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಸಿಎಂ

12:09 PM Jul 13, 2021 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಯಾವ ತೀರ್ಮಾನ ತೆಗೆದುಕೊಂಡಿದೆ ಎನ್ನುವ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೇಂದ್ರ  ಸಚಿವರೊಂದಿಗೆ ರಾಜ್ಯದ ನೀರಾವರಿ ಯೊಜನೆಗಳ ಬಗ್ಗೆ ಚರ್ಚೆ, ಮಾಡಿದ್ದೇವೆ. ಕೃಷ್ಣಾ ಯೋಜನೆಗೆ ನೋಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು. ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಕ್ಲಿಯರನ್ಸ್ ನೀಡುವುದು, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಆದಷ್ಟು ಬೇಗ ಕೇಂದ್ರದ ದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ  ಎಂದರು.

ಇದನ್ನೂ ಓದಿ:ನಂದಿಗಿರಿಧಾಮದಲ್ಲಿ ವಾರಂತ್ಯದಲ್ಲಿ ಸಾರ್ವಜನಿಕರ/ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ!

ಬಹಳ ಮಹತ್ವದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Advertisement

ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಮೇಕೆದಾಟು ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next