Advertisement

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

10:51 PM Nov 19, 2024 | Team Udayavani |

ಚಿಕ್ಕಬಳ್ಳಾಪುರ: ಕೋವಿಡ್‌ ಹಗರಣದ ತನಿಖೆ ಹೆಸರಲ್ಲಿ ಅವರು ಬರೀ ಲಕ್ಷ್ಮೀ ಪಟಾಕಿ ಸಿಡಿಸುತ್ತಿದ್ದಾರೆ. ನಾನು 2013 ರಿಂದ 2018ರ ವರೆಗೆ ಏನೆಲ್ಲಾ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆದಿದೆ ಅದೆಲ್ಲವನ್ನೂ ಸಮಯ ಬಂದಾಗ ಬಿಚ್ಚಿಡುತ್ತೇನೆಂದು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಮಾಜಿ ಆರೋಗ್ಯ ಸಚಿವ, ಸಂಸದ ಡಾ.ಕೆ.ಸುಧಾಕರ್‌ ಎಚ್ಚರಿಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ತನಿಖೆ ಹೆಸರಲ್ಲಿ ರೂಪಿಸಿದ ವರದಿಯನ್ನು ಸದನದಲ್ಲಿ ಮಂಡಿಸಬೇಕಾಗಿತ್ತು. ಆದರೆ, ಕಾನೂನು ಬಾಹಿರವಾಗಿ ಮುಖ್ಯಮಂತ್ರಿ ಕಚೇರಿಯಿಂದ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಲಾಗುತ್ತಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250 ಔಷಧಗಳ ಕೊರತೆ ಉಂಟಾಗಿದೆ. ಟೆಂಡರ್‌ ಕರೆಯದೇ ಸರ್ಕಾರ ಕೈ ಕಟ್ಟಿ ಕೂತಿದೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next