Advertisement
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಳೆಯಿಲ್ಲದೆ ನಾವು ತುಂಬಾ ಸಂಕಷ್ಟದಲ್ಲಿದ್ದೇವೆ. ರಾಜ್ಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ವೀಕ್ಷಿಸಬೇಕು ಎಂದು ಸುಪ್ರೀಂ ಕೋರ್ಟಿನಲ್ಲೂ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಯಶಸ್ವಿಯಾಗಿದ್ದೇವೆ. ಕರ್ನಾಟಕ ಕಾಂಗ್ರೆಸ್ ಸರಕಾರ ಈಗ ದೇಶಕ್ಕೆ ಮಾದರಿಯಾಗಿದೆ, ತೆಲಂಗಾಣ ಸಹಿತ ಮುಂದಿನ ಚುನಾವಣೆಗಳಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಮಾದರಿಯಾಗಲಿವೆ.