ಮಧ್ಯಪ್ರದೇಶ: 2024ರ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಬಜರಂಗದಳವನ್ನು ನಿಷೇಧಿಸುವುದಿಲ್ಲ ಎಂದು ಹೇಳಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರು ಆದರೆ ಗೂಂಡಾಗಳು ಮತ್ತು ಗಲಭೆಕೋರರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ವೇಳೆ ಸಿಂಗ್ ಈ ವಿಚಾರವನ್ನು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಾವು ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೀರಾ ಎಂಬ ಪ್ರಶ್ನೆ ಕೇಳಿದ ಮಾಧ್ಯಮ ಪ್ರತಿನಿಧಿಯ ಪ್ರಶ್ನೆಗೆ “ನಾವು ಬಜರಂಗದಳವನ್ನು ನಿಷೇಧಿಸುವುದಿಲ್ಲ ಏಕೆಂದರೆ ಬಜರಂಗದಳದಲ್ಲಿ ಕೆಲವು ಒಳ್ಳೆಯ ಜನರು ಸಹ ಇರಬಹುದು ಹಾಗಾಗಿ ಬಜರಂಗದಳ ನಿಷೇಧ ಮಾಡಲ್ಲ ಆದರೆ ಗಲಭೆಗಳಲ್ಲಿ ಅಥವಾ ಹಿಂಸೆಗೆ ಸಂಬಂದಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದರು.
ಏತನ್ಮಧ್ಯೆ ಹಿಂದುತ್ವದ ವಿಷಯದ ಬಗ್ಗೆ ಮಾತನಾಡಿದ ಸಿಂಗ್, ನಾನು ಒಬ್ಬ ಹಿಂದೂ, ಈಗಲೂ ಹಿಂದೂ ಆಗಿದ್ದೆನೆ, ಹಿಂದೂ ಆಗಿ ಉಳಿಯುತ್ತೇನೆ. ನಾನು ಹಿಂದೂ ಧರ್ಮವನ್ನು ಅನುಸರಿಸುತ್ತೇನೆ ಜೊತೆಗೆ ನಾನು ಸನಾತನ ಧರ್ಮದ ಅನುಯಾಯಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಭಾರತ ದೇಶ ಎಲ್ಲರಿಗೂ ಸೇರಿದ್ದು- ಹಿಂದೂ, ಮುಸ್ಲಿಂ, ಸಿಖ್ ಮತ್ತು ಕ್ರಿಶ್ಚಿಯನ್. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ದೇಶ ವಿಭಜನೆ ಮಾಡುವುದನ್ನು ನಿಲ್ಲಿಸಬೇಕು. ದೇಶದಲ್ಲಿ ಶಾಂತಿಯನ್ನು ಸ್ಥಾಪಿಸಿ, ಶಾಂತಿಯಿಂದ ಮಾತ್ರ ದೇಶದ ಪ್ರಗತಿಯಾಗುತ್ತದೆ ಎಂದು ಸಿಂಗ್ ಹೇಳಿದರು.
ಇದನ್ನೂ ಓದಿ: Jaipur Express Train: ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆಗೈದ ರೈಲ್ವೆ ಪೊಲೀಸ್ ವಜಾ