Advertisement
ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷ ಕಚೇರಿ ಜೆಪಿ ಭವನದಲ್ಲಿ ಕರೆದಿರುವ ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮೋತ್ಸವಕ್ಕೆ ಬರುವಾಗ ಅವರ ಕ್ಷೇತ್ರದ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಆ ಕಾರ್ಯಕರ್ತನಿಗಾಗಿ ಒಂದು ಶ್ರದ್ಧಾಂಜಲಿ ಕೂಡ ಸಲ್ಲಿಕೆ ಮಾಡಿಲ್ಲ. ಇದು ಅವರ ಕಾರ್ಯಕರ್ತರನ್ನು ಉಳಿಸಿಕೊಳ್ಳುವ ರೀತಿ! ಕಾರ್ಯಕರ್ತ ಸತ್ತರೆ ಯಾರೂ ಕೇಳಲಿಲ್ಲ. ಕಾರ್ಯಕರ್ತನಿಗೆ ಬೆಲೆ ಕೊಡದೇ ಸಿದ್ದರಾಮಯ್ಯ ಅವರು ವೀರಾವೇಶದಲ್ಲಿ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Related Articles
Advertisement
ಮುಖ್ಯಮಂತ್ರಿ ಆಗುತ್ತೇನೆಂದು ಆಶಾ ಗೋಪುರ ಕಟ್ಟುತ್ತಿದ್ದಾರೆ ಕಟ್ಟಲಿ. ನಾಡಿನ ಜನರು ಅಂತಿಮವಾಗಿ ತೀರ್ಪು ಕೊಡುತ್ತಾರೆ. ಜನ ಏನು ತೀರ್ಪು ಕೊಡುತ್ತಾರೆ ನೋಡೋಣ ಎಂದರು.
ಅಧಿವೇಶನ ಕರೆಯಲು ಆಗ್ರಹ
ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ನವರು ಏನು ಬೇಕಾದರೂ ಮಾಡಿಕೊಳ್ಳಲಿ. ಮೊದಲು ರಾಜ್ಯ ಸರ್ಕಾರ ಅಧಿವೇಶನ ಕರೆಯಬೇಕು. ರಾಜ್ಯದಲ್ಲಿ ಮಳೆ ಬಂದು ದೊಡ್ಡ ಅನಾಹುತ ಆಗಿದೆ. ಅನೇಕ ಸಮಸ್ಯೆಗಳು ಆಗಿವೆ. ಈ ಬಗ್ಗೆ ಚರ್ಚೆ ಆಗಬೇಕು. ಕೂಡಲೇ ಸರ್ಕಾರ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.