Advertisement

ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ,ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ:ಡಿಕೆಶಿ

02:23 PM Oct 09, 2021 | Team Udayavani |

ಬೆಂಗಳೂರು: ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Advertisement

ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಚಾರವಾಗಿ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅಶೋಕ್ ಅವರು ನಮ್ಮ ಅಭ್ಯರ್ಥಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್ ಗೆ ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಯಾಕೆ ಸುಳ್ಳು ಹೇಳಬೇಕು? ಅದರ ಅಗತ್ಯ ನಮಗೇನಿದೆ? ಬೇಕಿದ್ದರೆ ಅಶೋಕ್ ಮನಗೂಳಿ ಅವರನ್ನೇ ಕೇಳಿ ಎಂದರು.

15 ದಿನಗಳ ಹಿಂದೆ ಭೇಟಿ ಮಾಡಿದ್ದರು ಅಂದರೆ ಕ್ಯಾಲೆಂಡರ್ ತೆಗೆದುಕೊಂಡು ಲೆಕ್ಕಹಾಕಿ ಹೇಳಿಲ್ಲ. ಅವರು ಸಾಯುವ ಸ್ವಲ್ಪ ದಿನಗಳ ಮೊದಲು ಭೇಟಿ ಮಾಡಿದ್ದರು. ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್ ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ.‌ಆ ನೋವಿನಿಂದ ಮಾತನಾಡಿದ್ದಾರೆ. ಅದಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲ ಎಂದರು.

ಇದನ್ನೂ ಓದಿ:ಪಾರದರ್ಶಕತೆಯಿಂದ ಕಾನ್ಸ್ ಟೇಬಲ್ಸ್,ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿ:ಆರಗ ಜ್ಞಾನೇಂದ್ರ

ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲಾ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಬಂದಿದ್ದರು. ಅದೇ ರೀತಿ ಮನಗೂಳಿ ಅವರು ಸಾಯುವ ಮುನ್ನ ನನ್ನನ್ನು ಭೇಟಿ ಮಾಡಿದ್ದು ನಿಜ. ಆಗ ಅವರ ಪುತ್ರ ಅಶೋಕ್ ಅವರು ಇದ್ದದ್ದೂ ನಿಜ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next