Advertisement
ಇದನ್ನೂ ಓದಿ : ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳಿಂದ ಆಹ್ವಾನವಿದೆ: ಜೆಡಿಎಸ್ ಶಾಸಕ ಚವ್ಹಾಣ
Related Articles
Advertisement
ನಲಪಾಡ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ”ಉದ್ಯೋಗ ಇದ್ದವರು ಏನೇನು ಮಾಡಿದ್ದಾರೆ ಅಂತ ಗೊತ್ತು.ಯಾವ ಹೋಟೆಲ್ ನಲ್ಲಿ ಏನು ಮಾಡಿದ್ದಾರೆ ಎಂದು ಗೊತ್ತಿದೆ. ನಿರುದ್ಯೋಗಿಗಳು ಎಲ್ಲರೂ ಬಾಂಬ್ ತಯಾರಿಸಲು ಹೋದರೆ ಈ ದೇಶದಲ್ಲಿ ಶಾಂತಿ ನೆಲೆಸಲು ಹೇಗೆ ಸಾಧ್ಯ” ಎಂದರು.
ಕಾಂಗ್ರೆಸ್ ”ಪೇ ಸಿಎಂ” ಅಭಿಯಾನದ ಬಗ್ಗೆ ಮಾತನಾಡಿ, ಪೇ ಸಿಎಂ ಕಾಂಗ್ರೆಸ್ ನ ವಿಕೃತ ಮನಸ್ಥಿತಿಗೆ ಸಾಕ್ಷಿಯಾಗಿದೆ. ಅವರಿಗೆ ನಾಚಿಕೆ ಆಗಬೇಕು. ನೇರಾನೇರ ರಾಜಕಾರಣ ಮಾಡಿ ಅದರ ಯೋಗ್ಯತೆ ಅವರಿಗೆ ಇಲ್ಲ. ರಮೇಶ್ ಕುಮಾರ್ ಈ ಹಿಂದೆ ಮೂರು ತಲೆ ಮಾರಿಗೆ ಆಗುವಷ್ಟು ಆಸ್ತಿ ಮಾಡಿಕೊಂಡಿದ್ದೇವೆ ಅಂದರು. ಅವರಿಗೆ ಯಾವ ಪೇಸಿಎಂ. ಕಾಂಗ್ರೆಸ್ ನವರನ್ನು ನಂಬುವ ಸ್ಥಿತಿಯಲ್ಲಿ ರಾಜ್ಯದ ಜನರಿಲ್ಲ. ಚುನಾವಣೆ ಸಮೀಪಿಸುತ್ತಿರುವುದರಿಂದ ಇಂತಹ ಗಿಮಿಕ್ ಮಾಡುತ್ತಿದ್ದಾರೆ” ಎಂದರು.
ಕಲಬುರಗಿಯಲ್ಲಿ ಸಿಪಿಐ ಮೇಲೆ ಹಲ್ಲೆಯಾದ ಬಗ್ಗೆ ಮಾತನಾಡಿ, ಒಬ್ಬ ಇನ್ಸ್ ಪೆಕ್ಟರ್ ಮೇಲೆ 30 ಜನ ದಾಳಿ ಮಾಡಿದ್ದಾರೆ. ಆತನ ಮೇಲೆ ಏನು ಆಗಬಹುದೋ ಎಲ್ಲಾ ಆಗಿದೆ. ಆತ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ನಾನು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ ಒಳ್ಳೆಯ ಕಡೆ ಚಿಕಿತ್ಸೆ ಕೊಡಿಸಿ ಎಂದು ಹೇಳಿದ್ದೇವೆ. ಬೆಂಗಳೂರಿಗೆ ಕರೆ ತಂದು ಚಿಕಿತ್ಸೆ ಕೊಡಲು ವಿಳಂಬವಾಗುತ್ತದೆ. ಹೀಗಾಗಿ ಹೈದ್ರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ. ವೈದ್ಯರ ಅನುಮತಿ ದೊರೆತ ತಕ್ಷಣ ರವಾನೆ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾಗರಾಜ್ ಶೆಟ್ಟಿ, ಕುಕ್ಕೆ ಪ್ರಶಾಂತ್ ಇದ್ದರು.