Advertisement

ದೆಹಲಿಯಲ್ಲಿ 24 ಗಂಟೆಯಲ್ಲಿ, 24,000 ಪ್ರಕರಣ ಪತ್ತೆ : ಆಕ್ಸಿಜನ್,ಬೆಡ್ ಕೊರತೆ

05:41 PM Apr 17, 2021 | Team Udayavani |

ನವದೆಹಲಿ: ಮುಂದಿನ ಕೆಲ ದಿನಗಳ ವರೆಗೆ  ಪರಿಸ್ಥಿತಿ ಮೇಲೆ ತೀವ್ರ ನಿಗಾ ವಹಿಸುತ್ತೇವೆ. ಒಂದು ವೇಳೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದರೆ, ಜನರ ಜೀವ ಉಳಿಸಿಕೊಳ್ಳಲು ಅಗತ್ಯ ಎನಿಸುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Advertisement

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಸಿಎಂ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 24000 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದಿದ್ದಾರೆ.

ದೆಹಲಿಯಲ್ಲಿ ಆಕ್ಸಿಜನ್ ಹಾಗೂ ರೆಮ್ಡೆಸಿವಿರ್ ಕೊರತೆ ಇದೆ ಎಂದಿರುವ ಕೇಜ್ರಿವಾಲ್, ದೆಹಲಿಯಲ್ಲಿ ಔಷಧಿಗಳ ಕೃತಕ ಅಭಾವ ಸೃಷ್ಠಿಸುತ್ತಿರುವವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ನಮ್ಮಲ್ಲಿ ಕಡಿಮೆ ಸಂಖ್ಯೆಯ ಐಸಿಯು ಬೆಡ್‍ಗಳು ಲಭ್ಯ ಇವೆ. ಆಕ್ಸಿಜನ್ ಹಾಗೂ ಐಸಿಯು ಬೆಡ್‍ಗಳ ಸಂಖ್ಯೆ ಶೀಘ್ರದಲ್ಲೆ ಮತ್ತಷ್ಟು ಕಡಿಮೆಯಾಗಲಿವೆ. ಬೆಡ್‍ಗಳ ಸಂಖ್ಯೆ ಹಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಾಗುತ್ತಿದೆ ಎಂದು ತಿಳಿಸಿದರು.

ಪ್ರಕಣಗಳ ಸಂಖ್ಯೆ ಯಾವಾಗ ಕೈಮಿರುತ್ತದೆ ಎಂಬುದು ಯಾರೊಬ್ಬರಿಗೂ ಗೊತ್ತಿಲ್ಲ. ಎರಡ್ಮೂರು ದಿನಗಳಲ್ಲಿ 6,000 ಬೆಡ್‍ಗಳನ್ನು ಸಿದ್ಧಪಡಿಸುತ್ತೇವೆ. ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ 4100 ಬೆಡ್‍ಗಳನ್ನು ಒದಗಿಸಿತ್ತು. ಆದರೆ, ಈ ಬಾರಿ ಕೇವಲ 1800 ಬೆಡ್‍ಗಳನ್ನು ನೀಡಲಾಗಿದೆ. ಕೋವಿಡ್ ಸೋಂಕಿತರಿಗೆ 50% ಬೆಡ್‍ಗಳನ್ನು ಮೀಸಲಿಡುವಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರಿಗೆ ಮನವಿ ಮಾಡಿದ್ದೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next