Advertisement
ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
Related Articles
Advertisement
ಜನತಾದರ್ಶನಕ್ಕೆ ಕೌಂಟರ್
ಸಿಎಂ ಸಿದ್ಧರಾಮಯ್ಯ ಅವರು ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಟಾಂಗ್ ನೀಡಿದ ಕುಮಾರಸ್ವಾಮಿ ಅವರು; ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.
ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.
ಏಕೈಕ ಸಂಸದರೂ ಇರಬಾರದು: ವಿಜಯೇಂದ್ರ
ರಾಜ್ಯದ 28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ. ಒಟ್ಟಾಗಿ ಹೋಗುವ ಕುರಿತು ಇಬ್ಬರು ಮಾತುಕತೆ ನಡೆಸಿದ್ದೇವೆ. ದೆಹಲಿಯಲ್ಲಿ ವರಿಷ್ಠರು ಸೀಟು ಹಂಚಿಕೆ ಬಗ್ಗೆ ಚರ್ಚಿಸುತ್ತಾರೆ ಎಂದು ವಿಜಯೇಂದ್ರ ಹೇಳಿದರು.
ಮೋದಿ, ನಡ್ಡಾ, ಅಮಿತ್ ಶಾ,ಎಚ್ ಡಿಕೆ ಅವರು ಈಗಾಗಲೇ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಲು ನಿರ್ಧರಿಸಲಾಗಿದೆ. ನಾನು ಕೂಡ ಈಗಾಗಲೇ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಹಿರಿಯರಾದ ಎಚ್.ಡಿ.ಕುಮಾರಸ್ವಾಮಿ ಅವರ ಜತೆಯೂ ಚರ್ಚಿಸಿದ್ದೇನೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಸಂಸದನೂ ಇರಬಾರದು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನು ಎದುರಿಸುವ ಕುರಿತು ನಾಲ್ಕು ಗೋಡೆಗಳ ಮಧ್ಯೆ ಕೂತು ಕಾರ್ಯತಂತ್ರ ಮಾಡಲಾಗುವುದು ಎಂದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.