Advertisement

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

11:35 PM Apr 24, 2024 | Team Udayavani |

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದ 400 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಮೈತ್ರಿ ಪಕ್ಷದಿಂದ 28ಕ್ಕೆ 28 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದರು.

Advertisement

ತಿಪಟೂರಿನಲ್ಲಿ ಬುಧವಾರ ಎನ್‌ಡಿಎ ಅಭ್ಯರ್ಥಿ ವಿ. ಸೋಮಣ್ಣ ಪರ ರೋಡ್‌ ಶೋ ನಡೆಸಿ ಮಾತನಾಡಿ, ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಮುತ್ಸದ್ಧಿ ರಾಜಕಾರಣಿ ಪ್ರಧಾನಿ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ಮಂಡ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾ.ದಲ್ಲಿ ಡಾ| ಮಂಜುನಾಥ್‌, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಕಡಿಮೆ ಅಂದರೂ 2.5 ಲಕ್ಷ ಬಹುಮತದಿಂದ ಗೆಲ್ಲಲಿದ್ದಾರೆ. ಎಚ್‌.ಡಿ. ದೇವೇಗೌಡರೇ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬ ಅಪೇಕ್ಷೆಯೊಂದಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

ಸಿದ್ದರಾಮಯ್ಯ ರಾಜ್ಯದ ಖಜಾನೆಯನ್ನು ಖಾಲಿಯಾಗಿಸಿರುವ ಅವರ ಗ್ಯಾರಂಟಿಗಳ ಬಗ್ಗೆ ಪದೇ ಪದೇ ಹೊಗಳಿಕೊಳ್ಳುತ್ತಿರುವುದು ಬಿಟ್ಟರೆ ದೇಶದ ರಕ್ಷಣೆ, ಅಭಿವೃದ್ದಿ ಬಗ್ಗೆ ಗ್ಯಾರಂಟಿ ನೀಡಿರುವ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂದು ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next