Advertisement

ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಸಿ.ಸಿ ಪಾಟೀಲ್ ವಿಶ್ವಾಸ

03:12 PM Oct 01, 2021 | Team Udayavani |

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಅಂತ ಪಕ್ಷ ನಿರ್ಧರಿಸಲಿದೆ. ಪಕ್ಷ ಸೂಚಿಸಿದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇವೆ. ಹಿಂದೆ ಉಪ ಚುನಾವಣೆ ಗೆದ್ದ ರೀತಿಯಲ್ಲೇ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ವಿಳಂಬ ಆಗುತ್ತಿರುವುದು ನಿಜ. ಆದರೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಇದನ್ನೂ ಓದಿ:ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರುತ್ತೇನೆ : ಎಂಎಲ್ ಸಿ ಸಂದೇಶ್ ನಾಗರಾಜ್

ಪಿಡಬ್ಲ್ಯೂಡಿ ರಸ್ತೆ ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಸಂಜಯ್ ಪಾಟೀಲ್ ಪರಸ್ಪರ ಕೆಸರೆರಚಾಟ ವಿಚಾರವಾಗಿ ಮಾತನಾಡಿದ ಅವರು, ನಾನು ಮಾಧ್ಯಮದ ಮುಂದೆ ಆ ಬಗ್ಗೆ ಮಾತನಾಡುವುದಿಲ್ಲ. ರಸ್ತೆಗಳ ಅಭಿವೃದ್ಧಿಯನ್ನು ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next