ಕಲಬುರಗಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನರ ಸ್ಪಂದಿಸುವಲ್ಲಿ ವಿಫಲವಾಗಿದ್ದು, ಇದೇ ವಿಷಯವನ್ನು ಮುಂದಿಟ್ಟಿಕೊಂಡು ಮೂರು ಉಪಚುನಾವಣೆಗಳನ್ನು ಎದುರಿಸಲಾಗುವುದು ಎಂದು ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಮೂರರಲ್ಲೂ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ:ಮತ್ತೆ ಲಾಕ್ ಡೌನ್ ಹೇರಬೇಡಿ, ಸಾವಿನ ಪ್ರಮಾಣ ಇಳಿಕೆಗೆ ನಿಗಾ ವಹಿಸಿ: ಉದ್ಧವ್ ಗೆ ಮಹೀಂದ್ರಾ
ಬಿಜೆಪಿ ಸರ್ಕಾರಗಳ ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಕೋವಿಡ್ ಕಾಲದಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು, ಯುವಕರು.. ಹೀಗೆ ಯಾರಿಗೂ ಅನುಕೂಲವಾಗುವ ಕೆಲಸ ಮಾಡಿಲ್ಲ. ಯಾರಿಗೂ ಉದ್ಯೋಗ ಕೊಡಲಿಲ್ಲ. ಬಿಜೆಪಿ ವೈಫಲ್ಯಗಳೇ ಕಾಂಗ್ರೆಸ್ ಗೆಲುವಿಗೆ ಸುಲಭವಾಗಲಿದೆ ಎಂದು ವಿಶ್ಲೇಷಿಸಿದರು.
ಸಿಡಿ ಪ್ರಕರಣದ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಈಗ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅವರ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ನನಗೆ ಎಸ್ಐಟಿ ನೋಟಿಸ್ ಯಾಕೆ ಕೊಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: ಕ್ರೈಸ್ತ ಸನ್ಯಾಸಿನಿ ಮೇಲೆ ಹಲ್ಲೆ ನಡೆದಿಲ್ಲ: ಪಿಣರಾಯಿ ಹೇಳಿಕೆ ಸುಳ್ಳು ; ಪಿಯೂಷ್ ಗೋಯಲ್