ಮೈಸೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಸೋಲನ್ನು ಸ್ವೀಕರಿಸಿದ್ದೇವೆ. ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡು ತ್ತೇವೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವವರಿಗೆ ಶುಭವಾಗಲಿ. ಅವರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುವ ಶಕ್ತಿ ಬರಲಿ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡುವುದು ಅವರ ಪಕ್ಷದ ಆಂತರಿಕ ವಿಚಾರ. ಅವರ ಆಂತರಿಕ ಸಮಸ್ಯೆಯನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ಇಂದು ದೇಶಾದ್ಯಂತ ಯುವಕ, ಯುವತಿಯರಿಗೆ 71 ಸಾವಿರ ಉದ್ಯೋಗ ಕೊಡುವ ಕೆಲಸ ಕೇಂದ್ರ ಸರಕಾರದಿಂದ ಆಗುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಯುವಕ, ಯುವತಿಯರಿಗೆ ಕೆಲಸ ಸಿಗುತ್ತದೆ. ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರವು ಸೂಚನೆ
ಕೊಟ್ಟಿದೆ. ಅತೀ ಅಗತ್ಯವಾಗಿರುವ ಬೇರೆ ಬೇರೆ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕೇಂದ್ರ ನಿರ್ದೇಶನ ನೀಡಿದೆ. ಉದ್ಯೋಗಗಳು ತುಂಬಾ ಖಾಲಿ ಇವೆ. ಹಣಕಾಸಿನ ಕಾರಣಕ್ಕೆ, ಬೇರೆ ಬೇರೆ ಕಾರಣಕ್ಕೆ ಖಾಲಿ ಹುದ್ದೆಗಳನ್ನು ತುಂಬಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.