Advertisement
ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೊದಲು ಜಾತಿವಾರು ಗಣತಿ ಮಾಡುತ್ತೇವೆ. ನಂತರ ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಕ್ರಾಂತಿಕಾರಿಯಾಗಿದೆ ಎಂದಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ ನಿಮಗಿಷ್ಟವಾದ ಹಾಗೂ ಇಷ್ಟವಾಗದ ಅಂಶಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.