Advertisement

ಹಿಮಾಚಲದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಅಭ್ಯರ್ಥಿ?

03:56 PM Dec 08, 2022 | Team Udayavani |

ಹಿಮಾಚಲ ಪ್ರದೇಶ: ವಿಧಾನ ಸಭಾ ಚುನಾವಣೆ ಫಲಿತಾಂಶ ಇನ್ನೇನು ಕೆಲವೇ ಹೊತ್ತಿನಲ್ಲಿ ಹೊರಬೀಳಲಿದ್ದು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ಜಯಭೇರಿ ಸಾಧಿಸುವತ್ತ ಮುನ್ನಡೆಯುತ್ತಿದೆ.

Advertisement

ಅಷ್ಟೇ ಅಲ್ಲದೆ 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯುವ ಹಂತದಲ್ಲಿದೆ, ಒಂದು ವೇಳೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವು ಮನೆಮಾಡಿದೆ.

ಈಗಾಗಲೇ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು ಕಾಂಗ್ರೆಸ್ ಯಾರಿಗೆ ಮುಖ್ಯಮಂತ್ರಿ ಪಟ್ಟ ನೀಡಲಿದೆ ಎಂಬುದು ಮಾತ್ರ ಕುತೂಹಲಕಾರಿಯಾಗಿದೆ.

ಸದ್ಯ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲಿ ಪ್ರತಿಭಾ ಸಿಂಗ್, ಸುಖ್ವಿಂದರ್ ಸಿಂಗ್ ಸುಖು, ಮುಖೇಶ್ ಅಗ್ನಿಹೋತ್ರಿ, ಠಾಕೂರ್ ಕೌಲ್ ಸಿಂಗ್, ಆಶಾ ಕುಮಾರಿ ಅವರ ಹೆಸರು ಮುಂಚೂಣಿಯಲ್ಲಿದೆ.

ಪ್ರತಿಭಾ ಸಿಂಗ್ :
ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು ಅವರ ಹೆಸರೂ ಮುಂಚೂಣಿಯಲ್ಲಿದೆ ಈ ಕುರಿತು ಹೇಳಿಕೆ ನೀಡಿದ ಅವರು ಪಕ್ಷ ಯಾವ ನಿರ್ಧಾರ ಕೈಗೊಳ್ಳುತ್ತದೋ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

Advertisement

ಇದಲ್ಲದೆ ಸುಖ್ವಿಂದರ್ ಸಿಂಗ್ ಸುಖು, ಮುಖೇಶ್ ಅಗ್ನಿಹೋತ್ರಿ, ಠಾಕೂರ್ ಕೌಲ್ ಸಿಂಗ್, ಆಶಾ ಕುಮಾರಿ ಹೆಸರೂ ಕೂಡ ಮುಂಚೂಣಿಯಲ್ಲಿದೆ. ಇದರ ನಡುವೆ ಬಿಜೆಪಿಯ ಆಪರೇಷನ್ ಕಮಲದ ಭೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಎದುರಾಗಿದ್ದು ಫಲಿತಾಂಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಜಯಭೇರಿ ಸಾಧಿಸಿದರೆ ಬಿಜೆಪಿಗೆ ಏನು ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಬೇಲ್‌ಗೆ ನೆರವಾಗದ್ದಕ್ಕೆ ವಕೀಲರ ಟಾರ್ಗೆಟ್‌; ಜೈಲಿನಲ್ಲಿದ್ದ ವೇಳೆ ಜಾಮೀನು ನೀಡಲು ಸಹಕರಿಸದ್ದಕ್ಕೆ ಪ್ರತೀಕಾರ

 

 

 

Advertisement

Udayavani is now on Telegram. Click here to join our channel and stay updated with the latest news.

Next