ಚೆನ್ನೈ: ತಮಿಳುನಾಡಿನಲ್ಲಿ ಮತ್ತೂಮ್ಮೆ ಚಂಡಮಾರುತ ಪ್ರಭಾವದಿಂದಾಗಿ ಮಳೆ ಬರುವ ಸಾಧ್ಯತೆ.
Advertisement
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ನೀಡಿದ ಮಾಹಿತಿ ಪ್ರಕಾರ ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದೆ. ಅದು ಚೆನ್ನೈ ಕರಾವಳಿಯಿಂದ 750 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿದೆ. ಅದು ಡಿ. 10ರಂದು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಅಪ್ಪಳಿಸುವ ಸಾಧ್ಯತೆ ಇದೆ.
ಡಿ. 6ರ ಸಂಜೆ ಬಂಗಾಲ ಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದೆ. ಇದರಿಂದಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.