Advertisement

Lok Sabha polls; ಜಾಲತಾಣ, ಜಾಹೀರಾತು; ಆಯೋಗ ಕಟ್ಟೆಚ್ಚರ

11:40 PM Mar 20, 2024 | Team Udayavani |

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಳ್ಳುವ ರಾಜಕೀಯ ಪಕ್ಷ, ವ್ಯಕ್ತಿಗಳ ಜಾಹೀರಾತುಗಳ ಬಗ್ಗೆಯೂ ಚುನಾವಣ ಆಯೋಗ ನಿಗಾ ವಹಿಸಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

Advertisement

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹಾಗೂ ಜಿಲ್ಲಾ ವಾರ್ತಾಧಿಕಾರಿಗಳಿಗೆ ಬುಧವಾರ ಆಯೋಜಿಸಿದ್ದ ಚುನಾವಣೆ ಕುರಿತು ಕಾರ್ಯಾಗಾರ ಹಾಗೂ ಸಂವಾದದಲ್ಲಿ ಮಾತನಾಡಿದರು.

ಟೀವಿ, ಕೇಬಲ್‌, ಪತ್ರಿಕೆಗಳಲ್ಲಿ ಭಿತ್ತರ ಗೊಳ್ಳುವ ರಾಜಕೀಯ ಜಾಹೀರಾತುಗಳಿಗೆ ಮಾಧ್ಯಮ ಪ್ರಮಾಣೀಕರಣ ಮೇಲುಸ್ತುವಾರಿ ಸಮಿತಿ (ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್‌ ಕುಮಾರ್‌ ಮಾತನಾಡಿ, ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಅಧಿಕಾರದಲ್ಲಿರುವ ಪಕ್ಷಗಳು ಯಾವುದೇ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಸರಕಾರದ ಕಾಮಗಾರಿಗಳಿಗೆ ಚಾಲನೆ ನೀಡುವಂತಿಲ್ಲ. ವರ್ಗಾವಣೆ ಆದೇಶ ನೀಡುವಂತಿಲ್ಲ. ಅದೇ ವೇಳೆ ವರ್ಗಾವಣೆ ಆದೇಶ ಪಡೆದು ವರ್ಗಾವಣೆ ಆದ ಜಾಗದಲ್ಲಿ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅಧಿಕಾರ ಸ್ವೀಕರಿಸಿಲ್ಲದಿದ್ದರೆ ಆ ವರ್ಗಾವಣೆ ಆದೇಶ ಜಾರಿಗೆ ಬರುವುದಿಲ್ಲ ಎಂದರು.

ಆದರೆ ಬರ ಪರಿಹಾರದ ತುರ್ತು ಸೇವೆಗಳು, ಪ್ರಕೃತಿ ವಿಕೋಪಗಳ ಪರಿಹಾರ, ವೈದ್ಯಕೀಯ ಚಿಕಿತ್ಸೆ, ಸಿಎಂ ಪರಿಹಾರ ನಿಧಿ ಜಾರಿಗೆ ಅಡೆತಡೆ ಇರುವುದಿಲ್ಲ ಎಂದರು.

Advertisement

ಕಾಸಿಗಾಗಿ ಸುದ್ದಿ ಮೇಲೂ ನಿಗಾ
ಕಾಸಿಗಾಗಿ ಸುದ್ದಿ ಬಗ್ಗೆ ಸಹ ಆಯೋಗ ನಿಗಾ ವಹಿಸಿದ್ದು, ಇವು ವರದಿಯಾದರೆ ಜಿಲ್ಲಾ ಮಟ್ಟದಲ್ಲಿನ ಚುನಾವಣಾಧಿಕಾರಿಗಳು ಅಭ್ಯರ್ಥಿಗಳಿಗೆ 48 ಗಂಟೆಗಳೊಳಗೆ ನೋಟಿಸ್‌ ಜಾರಿ ಮಾಡುತ್ತಾರೆ. ಚುನಾವಣೆಗೆ ಮುದ್ರಣಗೊಳ್ಳುವ ಕರಪತ್ರ, ಕಾಸಿಗಾಗಿ ಸುದ್ದಿ, ಸುಳ್ಳು ಸುದ್ದಿ, ಜಾತಿ ಕೋಮುವಾದ ಪ್ರಚೋದಿಸುವ ಇತ್ಯಾದಿ ಸುದ್ದಿಗಳ ಮೇಲೆ ಆಯೋಗವು ಹದ್ದಿನ ಕಣ್ಣಿಟ್ಟಿದೆ ಎಂದರು.

ಇನ್‌ಫ‌ುÉಯೆನ್ಸರ್‌ ಮೇಲೂ ನಿಗಾ
ಸೋಷಿಯಲ್‌ ಮೀಡಿಯಾ ಇನ್‌ಫ್ಲೂ ಯೆನ್ಸರ್‌ಗಳ ಮೇಲೆಯೂ ಕಣ್ಣಿಡಲಿದ್ದೇವೆ. ಅವರು ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು. ಆದರೆ ಇಂತವರಿಗೆಯೇ ಮತ ಹಾಕಿ ಎಂದು ಹೇಳುವಂತಿಲ್ಲ ಎಂದು ಚುನಾವಣ ಆಯೋಗದ ಐಟಿ ಮತ್ತು ಮಾಧ್ಯಮದ ವಿಶೇಷಾಧಿಕಾರಿ ಸೂರ್ಯಸೇನ್‌ ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಮಾತನಾಡಿ, ಜಿಲ್ಲಾಮಟ್ಟದ ವಾರ್ತಾಧಿಕಾರಿಗಳು ಚುನಾವಣ ಮಾರ್ಗಸೂಚಿಗಳನ್ವಯ ಕರ್ತವ್ಯ ನಿರ್ವಹಿಸಬೇಕು ಎಂದರು. ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಸುದ್ದಿ ಮತ್ತು ಪತ್ರಿಕಾ ಶಾಖೆಯ ಉಪನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಹಾಗೂ ಎಲ್ಲ ಜಿಲ್ಲೆ ಗಳ ವಾರ್ತಾಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಾಧ್ಯಮ ಪ್ರತಿನಿಧಿಗಳಿಗೆ
ಅಂಚೆ ಮತದಾನ ವ್ಯವಸ್ಥೆ
ಅಪರ ಮುಖ್ಯ ಚುನಾವಣಾಧಿಕಾರಿ ಗಳಾದ ಕೂರ್ಮಾ ರಾವ್‌ ಮಾತನಾಡಿ, ಚುನಾವಣ ಕರ್ತವ್ಯದಲ್ಲಿರುವ 16 ತುರ್ತು ಸೇವೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅಂಚೆ ಮತದಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತೆಯೇ ಕರ್ತವ್ಯನಿರತ ಮಾಧ್ಯಮ ಪ್ರತಿನಿಧಿಗಳು 12-ಡಿ ಅರ್ಜಿ ಭರ್ತಿ ಮಾಡಿ, ವಾರ್ತಾ ಇಲಾಖೆಯ ನೋಡಲ್‌ ಅಧಿಕಾರಿಗೆ ಸಲ್ಲಿಸಿದಲ್ಲಿ ಅವರಿಗೆ ಅಂಚೆ ಮತದಾನದ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣ ಆಕ್ರಮ ನಡೆಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಆಯೋಗ ಕ್ರಮ ಕೈಗೊಂಡಿದೆ. ನಾವು ನಮ್ಮ ಮೂಲಗಳು, ದೂರುಗಳು ಮತ್ತು ಮಾಧ್ಯಮಗಳ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳುತ್ತೇವೆ.
– ವೆಂಕಟೇಶ್‌ ಕುಮಾರ್‌, ಅಪರ ಮುಖ್ಯ ಚುನಾವಣಾಧಿಕಾರಿ

 

Advertisement

Udayavani is now on Telegram. Click here to join our channel and stay updated with the latest news.

Next