Advertisement

ಕಲಬುರಗಿ: ಮದುವೆಯ ಬಸ್ ಉರುಳಿ 30 ಜನರಿಗೆ ಗಾಯ ಇಬ್ಬರು ಗಂಭೀರ

09:18 PM Jun 01, 2022 | Team Udayavani |

ಕಲಬುರಗಿ: ಅಫ್ಜಲ್ ಪುರ ತಾಲೂಕಿನ ಕಣ್ಣಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ಮದುವೆಗೆ ತೆರಳಿದ್ದ ಬಸ್ ವೊಂದು ಉರುಳಿಬಿದ್ದ ಪರಿಣಾಮ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Advertisement

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿದೆ.

ಅಪಘಾತಕ್ಕೀಡಾದ ಬಸ್ಸಿನಲ್ಲಿದ್ದವರು, ಹಾವನೂರ ಗ್ರಾಮದಿಂದ ಕಲಬುರಗಿ ನಗರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಹಾವನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಬಿದ್ದಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು “ಉದಯವಾಣಿ”ಗೆ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next