Advertisement

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

12:50 AM May 28, 2022 | Team Udayavani |

ವೇಣೂರು: ಮದುವೆ ಶಾಸ್ತ್ರದ ವೇಳೆ ಹಾರ ಬದಲಿಸುವಾಗ ವರನ ಕೈ ತಾಗಿತೆಂದು ವಧು ಹಾರವನ್ನೇ ಎಸೆದು ಮದುವೆ ನಿರಾಕರಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಮೇ 25ರಂದು ನಡೆದಿದೆ.

Advertisement

ಮೂಡುಕೊಣಾಜೆಯ ಯುವತಿಗೆ ನಾರಾವಿಯ ಯುವಕನೊಂದಿಗೆ ಮದುವೆ ನಿಶ್ಚಯ ಆಗಿ ನಾರಾವಿ ಸಭಾ ಭವನವೊಂದರಲ್ಲಿ ಮೇ 25ಕ್ಕೆ ಮದುವೆ ನಿಗದಿಯಾಗಿತ್ತು. ಸುಮಾರು 500ಕ್ಕೂ ಹೆಚ್ಚು ಮಂದಿಗೆ ಸಿಹಿಯೂಟದ ವ್ಯವಸ್ಥೆ ಮಾಡಲಾಗಿತ್ತು.

ಮದುವೆ ಶಾಸ್ತ್ರ ನಡೆಯುತ್ತಿದ್ದಂತೆ ಅರ್ಚಕರು ಹಾರ ಬದಲಿಸುವಂತೆ ಸೂಚಿಸಿದ್ದಾರೆ. ಅದರಂತೆ ವರ ಹಾರವನ್ನು ವಧುವಿನ ಕುತ್ತಿಗೆಗೆ ಹಾಕುತ್ತಿದ್ದಂತೆ ವಧು ರೊಚ್ಚಿಗೆದ್ದಿದ್ದಾಳೆ. ವರ ಹಾರ ಹಾಕುವಾಗ ವಧುವಿನ ಕೊರಳಿಗೆ ಕೈ ತಾಗಿದೆಯೆಂದು ಸಿಟ್ಟಿಗೆದ್ದ ವಧು ಮಂಟಪದಿಂದ ಹೊರನಡೆಯಲು ಮುಂದಾಗುತ್ತಿದ್ದಂತೆ ಸಂಬಂಧಿ ಕರು ಸಮಾಧಾನಪಡಿಸಿದ್ದಾರೆ. ಆದರೆ ಘಟನೆಯಿಂದ ಅವಮಾನಕ್ಕೊಳಗಾದ ವರನ ಕಡೆ ಯವರು ಮದುವೆಯನ್ನು ನಿರಾಕರಿಸಿದ್ದಾರೆ.

ಹೆಣ್ಣು ಗಂಡಿನ ಕಡೆಯವರು ಮಾತಿಗೆ ಮಾತು ಬೆಳೆಸಿಕೊಂಡಿದ್ದು, ಸಣ್ಣ ಮಟ್ಟಿನ ಜಗಳ ಪ್ರಾರಂಭ ಆದಾಗ ವೇಣೂರು ಪೊಲೀಸರು ಆಗಮಿಸಿದ್ದಾರೆ. ಎರಡೂ ಕಡೆಯವರಿಗೆ ಮಾತುಕತೆಗೆ ಪೊಲೀಸರು ಅವಕಾಶ ಮಾಡಿಕೊಟ್ಟರೂ ಸಂಬಂಧ ಬೆಸೆಯದೆ ಮದುವೆ ಮುರಿದುಬಿದ್ದಿದೆ. ತಯಾರಾಗಿದ್ದ ಊಟವನ್ನು ಸ್ಥಳೀಯ ಶಾಲೆಗಳಿಗೆ ನೀಡಿರುವುದಾಗಿ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next