Advertisement
ವಾರಾಂತ್ಯ ಕರ್ಫ್ಯೂವಿನನ ಮೊದಲ ದಿನವಾದ ಶನಿವಾರ ದಿನಸಿ ಅಂಗಡಿಗಳು, ಮೀನು, ಮಾಂಸ, ತರಕಾರಿ, ಜಾಷಧ ಅಂಗಡಿಗಳು, ಪೆಟ್ರೋಲ್ ಬಂಕ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಮಳಿಗೆಗಳು ಎಂದಿನಂತೆ ಕಾರ್ಯಾಚರಿಸಿದವು. ಹೊಟೇಲ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ ಇತ್ತು. ಆನ್‌ಲೈನ್ ಸೇವೆ ಚಾಲನೆಯಲ್ಲಿತ್ತು. ಸಾರ್ವಜನಿಕ ಉದ್ಯಾನವನ, ಬೀಚ್‌ಗಳನ್ನು ಮುಚ್ಚಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
Related Articles
ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿ ಅನಗತ್ಯವಾಗಿ ಹಾಗೂ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಸಂಚರಿಸುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡರು. ಕಮಿಷನರೆಟ್ ವ್ಯಾಪ್ತಿಯಲ್ಲಿ 30, ಕೇರಳ ಗಡಿ ಸೇರಿದಂತೆ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 31 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಉಡುಪಿ ಜಿಲ್ಲೆಯ 25ಕ್ಕೂ ಅಧಿಕ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ತಪಾಸಣೆ ಕಾರ್ಯ ನಡೆಸುತ್ತಿದ್ದಾರೆ.
Advertisement
2,54,550 ರೂ. ದಂಡ ವಸೂಲಿನಿಯಮ ಉಲ್ಲಂಘನೆಗೆ ಸಂಬಂಧಿಸಿ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶನಿವಾರ ಮೋಟಾರು ವಾಹನ ಕಾಯ್ದೆಯನ್ವಯ 642 ಪ್ರಕರಣ ಹಾಗೂ ಮಾಸ್ಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ 177 ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 2,54,550 ರೂ. ದಂಡ ವಸೂಲು ಮಾಡಲಾಗಿದೆ.